ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆ ದಾಖಲಾಗಿದ್ದ ಹಾಸ್ಯ ನಟ ರಾಜು ಶ್ರೀವಾಸ್ತವ Comedian Raju Shrivasthav ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ಬಗ್ಗೆ ರಾಜು ಅವರು ಚಿಕಿತ್ಸೆ ಪಡೆಯುತ್ತಿರುವ ಏಮ್ಸ್ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾವು ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.
ರಾಜು ಅವರ ಮಿದುಳಿಗೆ ಹಾನಿಯಾಗಿದ್ದು, ಕಳೆದ 46 ಗಂಟೆಗಳಿಂದ ಅವರಿಗೆ ಪ್ರಜ್ಞೆ ಬಂದಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Also read: ಸಂಗೀತಾಭಿಮಾನಿಗಳ ಮನೆಮಾತಾಗಿದ್ದ ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ: ಕನ್ನಡದಲ್ಲೇ ಪ್ರಧಾನಿ ಮೋದಿ ಸಂತಾಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post