No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜನ ಸತ್ತರೂ ಕಾಂಗ್ರೆಸ್‌ ಸಾಧನಾ ಸಂಭ್ರಮಾಚರಣೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

kalpa News by kalpa News
May 21, 2025
in ರಾಷ್ಟ್ರೀಯ
0
ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಬೆಂಗಳೂರಿನಲ್ಲಿ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಇಂಥ ಸ್ಥಿತಿಯಲ್ಲಿ ನೀವು ವಿಜಯನಗರಕ್ಕೆ ಹೋಗಿ ಸಂಭ್ರಮಾಚರಣೆ ಮಾಡುತ್ತಿದ್ದೀರಲ್ಲ? ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರೇ… ನಿಮಗೆ ಸ್ವಲ್ಪವೂ ನಾಚಿಕೆ ಆಗುವುದಿಲ್ಲವೇ? ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ #Minister Pralhad Joshi ಕಿಡಿ ಕಾರಿದರು.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಬೆಂಗಳೂರು ಜಲಾವೃತವಾಗಿ ಜನ ಸತ್ತರೂ ಇವರು ವಿಜಯನಗರಕ್ಕೆ ಹೋಗಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ ಎನ್ನುತ್ತ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ನಿಜಕ್ಕೂ ಇವರಿಗೆ ರಾಜ್ಯದ ಜನಜೀವನದ ಬಗ್ಗೆ ಕಾಳಜಿಯೇ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ಸೇರಿದಂತೆ ರಾಜ್ಯದ ರಸ್ತೆಗಳೆಲ್ಲ ಹದಗೆಟ್ಟು ಹೋಗಿವೆ. ಒಂದೇ ಒಂದು ರಸ್ತೆಯ ತೆಗ್ಗು-ಗುಂಡಿ ಮುಚ್ಚಿಲ್ಲ. ಮಣ್ಣು ಸಹ ಹಾಕಿ ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ. ಡಿಸಿಎಂ ಡಿಕೆ ಶಿವಕುಮಾರ್‌ ಬೆಂಗಳೂರು ಉಸ್ತುವಾರಿ ಮಂತ್ರಿ.ಯಾಗಿದ್ದರೂ ಆಡಳಿತದ ಕಡೆ ಗಮನವಿಲ್ಲ. ಬೆಂಗಳೂರಿನ ರಾಜಕಾಲುವೆ ಸಹ ಸ್ವಚ್ಛಗೊಳಿಸಿದ ಇವರು ಖಜಾನೆ ಮಾತ್ರ ಸ್ವಚ್ಛಗೊಳಿಸುತ್ತಿದ್ದಾರಷ್ಟೇ ಎಂದು ಕಿಡಿಕಾರಿದರು.

ಬೆಂಗಳೂರು ಪರಿಸ್ಥಿತಿ ನೋಡಲು ಸರ್ಕಾರದಲ್ಲಿ ಯಾರೂ ಇಲ್ಲದಂತಾಗಿದೆ. ಬ್ರ್ಯಾಂಡ್‌ ಬೆಂಗಳೂರು ಎಂದೆಲ್ಲಾ ಬಡಾಯಿ ಬಿಡುವ ಇವರ ಆಡಳಿತದಲ್ಲಿ ಬೆಂಗಳೂರು ಪರಿಸ್ಥಿತಿ ಏನಾಗಿದೆ? ಎಂಬುದನ್ನು ಸದ್ಯ ಸುರಿದ ಮಳೆಯೇ ತೆರೆದಿಟ್ಟಿದೆ. ರಸ್ತೆ ಅಭಿವೃದ್ಧಿ, ರಾಜಕಾಲುವೆ ಸ್ವಚ್ಛತೆಯಂತಹ ಕಾಮಗಾರಿ ಕೈಗೊಳ್ಳಲೂ ಸಾಧ್ಯವಾಗದ ಗಂಭೀರ ಸ್ಥಿತಿಗೆ ಕೊಂಡೋಯ್ದಿದ್ದಾರೆ ಎಂದು ಸಚಿವ ಜೋಶಿ ಹರಿಹಾಯ್ದರು.

https://kalpa.news/wp-content/uploads/2025/03/PES-Video.mp4

ಸಿಎಂ ಕುರ್ಚಿಗೆ ಪೈಪೋಟಿ: ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಇಬ್ಬರೂ ಬರೀ ಗುಂಪುಗಾರಿಕೆ ಮಾಡುತ್ತ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ರಾಹುಲ್‌ ಗಾಂಧಿ ಪಕ್ಕದಲ್ಲಿ ಕಾಣಿಸಿಕೊಳ್ಳಲು ಪರಸ್ಪರ ಹಾತೊರೆಯುತ್ತಿದ್ದಾರೆ ವಿನಃ ರಾಜ್ಯದ ಅಭಿವೃದ್ಧಿ, ಜನ ಜೀವನದ ಬಗ್ಗೆ ಕಿಂಚಿತ್ತೂ ಯೋಚಿಸುತ್ತಿಲ್ಲ ಎಂದು ಆರೋಪಿಸಿದರು.

ಲಂಚ ಹೊಡೆಯಲು ಫ್ರೀ ಬಿಟ್ಟ ಸಿಎಂ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಆಡಳಿತ ವೈಫಲ್ಯ ಕಂಡಿದ್ದಾರೆ. ಲಂಚ ಹೊಡೆಯಲು ಇಡೀ ಸರ್ಕಾರವನ್ನು ಫ್ರೀ ಬಿಟ್ಟು ಬಿಟ್ಟಿದ್ದಾರೆ. ವಾಲ್ಮೀಕಿ, ಮೂಡಾ ಹಗರಣ, ಈಗ ಕಾರ್ಮಿಕ ಇಲಾಖೆಯಲ್ಲೂ ಹಗರಣ ನಡೆದಿದೆ. ಇದೆಲ್ಲವನ್ನೂ ಮುಚ್ಚಿಡಲು ಪ್ರಯತ್ನಿಸುತ್ತಿರುವುದೇ ಇವರ ೨ ವರ್ಷದ ಸಾಧನೆ ಎಂದು ಸಚಿವ ಜೋಶಿ ದೂರಿದರು.

ರಾಜ್ಯ ಸರ್ಕಾರದಲ್ಲಿ ವೇತನ ಕೊಡಲೂ ಹಣವಿಲ್ಲದಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 303 ಕೋಟಿ ಬಾಕಿಯನ್ನು ಇನ್ನೂ ಕೊಟ್ಟಿಲ್ಲ. ಇವರು ಅದ್ಯಾವ ಸ್ಥಿತಿಯಲ್ಲಿ ಸರ್ಕಾರ ನಡೆಸುತ್ತಿದ್ದಾರೋ ಗೊತ್ತಿಲ್ಲ? ಅಭಿವೃದ್ಧಿ ಕಾಮಗಾರಿಗಳು ನಡೆಯದೆ ಶಾಸಕರೇ ದಿಕ್ಕೆಟ್ಟು ಕುಳಿತಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದಿದ್ದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಈಗ ಭ್ರಷ್ಟಾಚಾರ ಮಿತಿ ಮೀರಿದೆ ಎಂದಿದ್ದಾರೆ. ದುರಾಡಳಿತದ ಬಗ್ಗೆ ಇದಕ್ಕಿಂತ ನಿದರ್ಶನ ಬೇಕೇ? ಎಂದು ಜೋಶಿ ಪ್ರಶ್ನಿಸಿದರು.

ʼತುಷ್ಟೀಕರಣ, ಬೆಲೆ ಏರಿಕೆ, ಭ್ರಷ್ಟಾಚಾರ, ದುರಾಡಳಿತ, ಹಗರಣಗಳೇ ಕಾಂಗ್ರೆಸ್‌ನ ಪಂಚ ಗ್ಯಾರೆಂಟಿಗಳು:

ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ʼತುಷ್ಟೀಕರಣ, ಬೆಲೆ ಏರಿಕೆ, ಭ್ರಷ್ಟಾಚಾರ, ದುರಾಡಳಿತ ಮತ್ತು ಹಗರಣಗಳುʼ ಎಂಬ ಐದು ಪಂಚ ಗ್ಯಾರೆಂಟಿಗಳನ್ನು ನೀಡಿದೆಯೇ ಹೊರತು ಜನಪರ ಗ್ಯಾರೆಂಟಿಗಳನ್ನಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ 2 ವರ್ಷದಿಂದ ಬರೀ ಟಿಪ್ಪು ಸುಲ್ತಾನ್‌ ಜಪ ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಕುಟುಕಿದರು.
ನೀರು, ಹಾಲಿನಿಂದ ಹಿಡಿದು ಆಲ್ಕೋಹಾಲ್‌ವರೆಗೂ 48 ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಜೀವ ಹಿಂಡುತ್ತಿರುವುದೇ ಇವರ ಬಹು ದೊಡ್ಡ ಸಾಧನೆಯಾಗಿದೆ. ಅಧಿಕಾರಕ್ಕೆ ಬಂದ ದಿನದಿಂದಲೂ ಸಂಪೂರ್ಣ ತುಷ್ಟೀಕರಣ, ಭ್ರಷ್ಟಾಚಾರ, ಹಗರಣ ಮತ್ತು ಮಿತಿಮೀರಿದ ಸಾಲದಲ್ಲಿ ತೊಡಗಿರುವುದೇ ಇವರ ಮಹತ್ಸಾಧನೆಯಾಗಿದೆ ಎಂದು ಸಚಿವ ಜೋಶಿ ಟೀಕಿಸಿದರು.

ಬೋಗಸ್‌ ಗ್ಯಾರೆಂಟಿಗಳು: ರಾಜ್ಯದ ಜನತೆಗೆ ಬೋಗಸ್‌ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ, ನಂತರದಲ್ಲಿ ಅವನ್ನು ಪೂರೈಸಲು ಹೆಣಗಾಡುತ್ತಿದೆ. ಗೃಹಲಕ್ಷ್ಮಿ, ಯುವ ನಿಧಿ ಯಾವುದೊಂದೂ ಜನರನ್ನು ಸಮರ್ಪಕವಾಗಿ ತಲುಪಿಲ್ಲ. ವರ್ಷದಲ್ಲಿ ಒಂದೆರೆಡು ಕಂತು ಹಾಕಿ ಫೋಸ್‌ ಕೊಡುತ್ತಿದೆಯಷ್ಟೇ ಎಂದು ಟೀಕಿಸಿದರು.

ಬೇಜವಾಬ್ದಾರಿ ಹೇಳಿಕೆ ಬೇಡ: ಪಹಲ್ಗಾಮ್‌ ಭಯೋತ್ಪಾದನಾ ದಾಳಿ ವಿರುದ್ಧ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ನಮ್ಮ ರಕ್ಷಣಾ ಪಡೆ ನಡೆಸಿದ ಪ್ರತಿ ದಾಳಿಗೆ ಕಾಂಗ್ರೆಸ್ಸಿಗರು ಸಾಕ್ಷಿ ಕೇಳುತ್ತಿದ್ದಾರೆ. ಭಯೋತ್ಪಾದನೆ ವಿರುದ್ಧ ಒಟ್ಟಾಗಿ ಹೋರಾಡಬೇಕಾದವರು ಮನಬಂದಂತೆ ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ಪಾಕಿಸ್ತಾನಕ್ಕೆ ಬೆಂಬಲ ಕೊಟ್ಟಂತಾಗುತ್ತದೆ. ಹಾಗಾಗಿ ಸ್ವಲ್ಪ ಜವಾಬ್ದಾರಿ ಅರಿತು ಮಾತನಾಡಬೇಕು ಎಂದು ಸಚಿವ ಜೋಶಿ ಸಲಹೆ ನೀಡಿದರು.
ಕಾಂಗ್ರೆಸ್‌ ಅವಧಿಯಲ್ಲಿ ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿ, ಹೈದ್ರಾಬಾದ್‌, ಬೆಂಗಳೂರು, ಪುಣೆ, ದೆಹಲಿವರೆಗೂ ದೊಡ್ಡ ಪ್ರಮಾಣದಲ್ಲಿ ಭಯೋತ್ಪಾದನೆ ದಾಳಿ ನಡೆದಿತ್ತು. ಖರ್ಗೆ ಅವರು ಹತ್ತು ವರ್ಷದ ಹಿಂದಿನ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಪರಿಸ್ಥಿತಿ ಹೇಗಿತ್ತು? ಎಂಬುದನ್ನು ನೆನಪಿಸಿಕೊಳ್ಳಲಿ ಎಂದು ಚಾಟಿ ಬೀಸಿದ ಸಚಿವ ಪ್ರಲ್ಹಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶಾದ್ಯಂತ ಶಾಂತಿಯ ವಾತಾವರಣವಿದೆ ಎಂದು ಪ್ರತಿಪಾದಿಸಿದರು.

ಸುಳ್ಳು ಹೇಳುತ್ತಲೇ ಕಾಂಗ್ರೆಸ್‌ ಅವನತಿಗೆ: ಕಾಂಗ್ರೆಸ್‌ ಪಕ್ಷ ಬರೀ ಸುಳ್ಳು ಹೇಳುತ್ತಿದ್ದರಿಂದಲೇ ಅವನತಿಗೆ ಬಂದಿದೆ. ನೆಹರು ಕಾಲಘಟ್ಟ ಬಿಟ್ಟರೆ ನಂತರದಲ್ಲಿ ಕಾಂಗ್ರೆಸ್‌ ಒಮ್ಮೆಯೂ ಮೂರು ಬಾರಿ ಅಧಿಕಾರಕ್ಕೆ ಬಂದ ಉದಾಹರಣೆಯಿಲ್ಲ. ಆದರೆ, ಎನ್‌ಡಿಎ ಆಡಳಿತದಲ್ಲಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿ ಪ್ರಧಾನಿಯಾಗಿದ್ದಾರೆ. ಭಯೋತ್ಪಾದನೆ ವಿರುದ್ಧ ಪ್ರಥಮದಿಂದಲೂ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುತ್ತಿದ್ದಾರೆ ಎಂದು ಜೋಶಿ ಕಾಂಗ್ರೆಸ್‌ ನಾಯಕರಿಗೆ ತಿವಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Pralhad JoshiNew DelhiNews_in_KannadaNews_Kannadaನವದೆಹಲಿಸಚಿವ ಪ್ರಲ್ಹಾದ ಜೋಶಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾನು ಮುಷ್ತಾಕ್’ಗೆ ಭೂಕರ್ ಪ್ರಶಸ್ತಿ | ಭಾರತೀಯತೆಯ ಬೆಸುಗೆಗೆ ಅಂತಾರಾಷ್ಟ್ರೀಯ ಮನ್ನಣೆ | ಕೆ.ವಿ. ಪ್ರಭಾಕರ್ ಸಂತಸ

Next Post

ರಾಜ್ಯದಲ್ಲಿ 16 ಕೊರೋನಾ ಸೋಂಕು ಪ್ರಕರಣ ಪತ್ತೆ | ಆರೋಗ್ಯ ಸಚಿವರು ಹೇಳಿದ್ದೇನು?

kalpa News

kalpa News

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ರಾಜ್ಯದಲ್ಲಿ 16 ಕೊರೋನಾ ಸೋಂಕು ಪ್ರಕರಣ ಪತ್ತೆ | ಆರೋಗ್ಯ ಸಚಿವರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL