ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ದೇಶದಾದ್ಯಂತ ಮಾರಕ ಕೊರೋನಾ ವೈರಸ್’ನ ಎರಡನೆಯ ಅಲೆಯ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಐದು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆಯಿಂದ ವಿಶೇಷ ಸೂಚನೆ ಹೊರಡಿಸಲಾಗಿದ್ದು, ಮಹಾರಾಷ್ಟ್ರ, ಪಂಜಾಬ್, ಕೇರಳ, ಛತ್ತೀಸ್’ಘಡ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಈಗಾಗಲೇ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಹೇರಲಾಗಿದ್ದು, ಪೂನಾದಲ್ಲಿ ಕೆಲವು ಪ್ರದೇಶಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ.
ಕರ್ನಾಟಕದ ಪರಿಸ್ಥಿತಿಯೇನು?
ಇನ್ನು ಈ ಐದು ರಾಜ್ಯಗಳಿಗೆ ಹೊಂದಿಕೊಂಡಿರುವ ರಾಜ್ಯಗಳಲ್ಲಿಯೂ ಸಹ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಕರ್ನಾಟಕ, ತಮಿಳುನಾಡು, ಗುಜರಾತ್, ಒರಿಸ್ಸಾ ಸೇರಿದಂತೆ ಹಲವು ರಾಜ್ಯಗಳ ಗಡಿ ಪ್ರದೇಶದಲ್ಲಿ ವಿಶೇಷ ಕಟ್ಟೆಚ್ಚ ವಹಿಸವಂತೆ ಆದೇಶಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿಯಲ್ಲಿ ಈಗಾಗಲೇ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ರಾಜ್ಯದೊಳಕ್ಕೆ ಪ್ರವೇಶಿಸಬೇಕಾದರೆ ಕೋವಿಡ್19 ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ಅಲ್ಲದೇ, ತಲಪಾಡಿಯಲ್ಲಿ ವೈದ್ಯಕೀಯ ಪರೀಕ್ಷೆಯೂ ಸಹ ಆರಂಭವಾಗಿದ್ದು, ರಾಜ್ಯ ಈ ಕ್ರಮಕ್ಕೆ ಗಡಿ ಭಾಗದಲ್ಲಿ ವಿರೋಧವೂ ಸಹ ವ್ಯಕ್ತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post