ಕಲ್ಪ ಮೀಡಿಯಾ ಹೌಸ್
ನವದೆಹಲಿ: ಎರಡು-ಮೂರು ವಾರಗಳಿಂದ ಕೊರೋನಾ ಎರಡನೆಯ ಅಲೆ ಜೋರಾಗಿದ್ದು, ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಅನೇಕರು ಸೋಂಕಿಗೆ ತುತ್ತಾಗುತ್ತಿರುವುದು ಕಂಡು ಬಂದಿದೆ.
ಇಂದು ಬೆಳಗ್ಗೆಯ ಹೊತ್ತಿಗೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,20,39,644ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 68,020 ಹೊಸ ಪ್ರಕರಣಗಳು ಪತ್ತೆಯಾಗಿದೆ. 24 ಗಂಟೆಗಳಲ್ಲಿ 291 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಒಂದೇ ದಿನ ಬರೋಬ್ಬರಿ 68,020 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿರುವುದರಿಂದ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,20,39,644ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 1,61,843ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
1,20,39,644 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 32,231 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,13,55,993ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,21,808ಕ್ಕೆ ತಲುಪಿದೆ ಎಂದು ತಿಳಿಸಲಾಗಿದೆ.
ಈವರೆಗೂ ದೇಶದಲ್ಲಿ 24,18,64,161 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಭಾರತದಲ್ಲಿ ಈ ವರ್ಷದ ಆರಂಭದಲ್ಲಿ ಅಂದರೆ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಎಂಬ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದ್ದು, ಹಿರಿಯ ನಾಗರಿಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 6,05,30,435 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















