ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ಎರಡನೇ ಅಲೆ ಕಣ್ಮುಂದೆ ಇದೆ. ಇದರಿಂದ ನಾವು ಜಾಗರೂಕರಾಗಿ ತಪ್ಪಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆಸಿದ್ದು, ಕೊರೋನಾ 2ನೇ ಅಲೆಯನ್ನು ಸಾಧ್ಯವಾದಷ್ಟು ಬೇಗ ತಡೆಯಬೇಕು. ಇಲ್ಲದಿದ್ದರೆ ದೇಶಾದ್ಯಂತ ಮಹಾಮಾರಿ ಮಹಾ ಸ್ಫೋಟವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಕೊರೋನಾ ಹೆಚ್ಚಾಗುತ್ತಿರುವುದರಿಂದ ವಿಡಿಯೋ ಕಾನ್ಫೆರನ್ಸ್ ಮೂಲಕ ಮುಖ್ಯಮಂತ್ರಿ ಗಳ ಜೊತೆ ಮಾತನಾಡಿದ ಪ್ರಧಾನಿ ಮೋದಿ ಅವರು, ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಬೇಕು. ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಹಾಗೂ ಕ್ಲಿನಿಕಲ್ ಸೌಲಭ್ಯ ಹೆಚ್ಚು ಮಾಡುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
ಮಾಸ್ಕ್ ಧರಿಸುವುದನ್ನು ಜನರು ಗಂಭೀರವಾಗಿ ಪರಿಗಣಿಸಿಲ್ಲ ಈ ವಿಚಾರದಲ್ಲಿ ಕಠಿಣ ಕ್ರಮ ಅನಿವಾರ್ಯ. ಇದು ಸ್ಥಳೀಯ ಜಿಲ್ಲಾಡಳಿತದ ವೈಫಲ್ಯವಾಗಿದೆ. ರಾಜ್ಯಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಅಗತ್ಯವಾಗಿದ್ದು ಹಳ್ಳಿಗಳಿಗೆ ಸೋಂಕು ವ್ಯಾಪಿಸಿದರೆ ಕಷ್ಟ. ಹೀಗಾಗಿ ಚಿಕ್ಕ ಚಿಕ್ಕ ಪಟ್ಟಣಗಳಲ್ಲೂ ಪರೀಕ್ಷೆಗಳನ್ನು ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ.
ದೇಶದಲ್ಲಿ ಕೊರೋನಾ ಎರಡನೇ ಅಲೆ ಕಂಡು ಬರುತ್ತಿದೆ. ಭಾರತದಲ್ಲಿ ಶೇ.96ರಷ್ಟು ಹೆಚ್ಚು ಪ್ರಕರಣಗಳು ಚೇತರಿಸಿಕೊಂಡಿವೆ. ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವು ಸಹ ಒಂದು ಎಂದರು.
ಸೋಂಕಿತ ವ್ಯಕ್ತಿಯನ್ನು ಶೀಘ್ರದಲ್ಲಿ ಪತ್ತೆ ಹಚ್ಚಬೇಕು. ಆರ್‌ಟಿಪಿಸಿಆರ್ ಶೇ.70ರಷ್ಟು ಹೆಚ್ಚಿಸಬೇಕು. ನಗರಗಳಿಗೆ ಸೋಂಕು ಹೆಚ್ಚು ವ್ಯಾಪಿಸುತ್ತಿದೆ. ಮೊದಲು ಟಿ1 ನಗರಗಳಲ್ಲಿ ಸೋಂಕು ಹೆಚ್ಚಿತ್ತು. ಹೀಗಾಗಿ ಸಣ್ಣ ಊರುಗಳಲ್ಲಿ ಹೆಚ್ಚು ಮಾಡಬೇಕು. ಟೆಸ್ಟಿಂಗ್ ಹೆಚ್ಚಿಸದಿದ್ದರೆ ಪರಿಸ್ಥಿತಿ ಗಂಭೀರವಾಗಿರುತ್ತದೆ. ಕೋವಿಡ್ ವಿಚಾರ ಗಂಭೀರವಾದದ್ದು, ಎಚ್ಚರ ತಪ್ಪಿ ನಡೆದುಕೊಳ್ಳಬೇಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ಸಣ್ಣ ನಗರಗಳಲ್ಲಿ ಕೋವಿಡ್ ಪರೀಕ್ಷೆ ಕೇಂದ್ರಗಳನ್ನು ಇನ್ನು ಹೆಚ್ಚಿನ ಮಟ್ಟಿಗೆ ಆರಂಭಿಸಬೇಕು. ಒಂದು ವರ್ಷದಿಂದ ಕೋವಿಡ್ ಜನರ ಜೀವ ಹಿಂಡುತ್ತಿದೆ. ಕೋವಿಡ್ ವ್ಯಾಕ್ಸಿನ್ ಬಂದಿದೆ ಎಂದು ನಿರ್ಲಕ್ಷ್ಯ ಮಾಡಬೇಡಿ. ಕೋವಿಡ್ ಅಟ್ಟಹಾಸ ಇನ್ನೂ ನಿಂತಿಲ್ಲ. ಎಷ್ಟು ಎಚ್ಚರವಾಗಿದ್ದರೂ ಸಾಲದು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news










Discussion about this post