ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಹೇಳಿದರು.
ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಈ ಬಜೆಟ್’ನಲ್ಲಿ ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೋತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ ಎಂದಿದ್ದಾರೆ.
ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ ಜಾರಿ ಮಾಡಲಿದ್ದು, ಕೃಷಿ ಉತ್ಪನ್ನಗಳ ಬೆಳವಣಿಗೆ ಆದ್ಯತೆ. ನೀರಾವರಿ, ಹಾಗೂ ಸ್ಟೋರೇಜ್’ಗಳ ನಿರ್ಮಾಣ ಮಾಡಲಿದ್ದೇವೆ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
Also read: ಕೇಂದ್ರ ಬಜೆಟ್ | ಮಧ್ಯಮ ವರ್ಗ, ದೇಶದ ಬಲವರ್ಧನೆಗೆ ಬೆನ್ನೆಲುಬು | ಡಿ.ಎಸ್.ಅರುಣ್
ನಮ್ಮ ಆರ್ಥಿಕತೆಯು ಎಲ್ಲಾ ಪ್ರಮುಖ ಆರ್ಥಿಕತೆಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಕಳೆದ 10 ವರ್ಷಗಳಲ್ಲಿ ನಮ್ಮ ಅಭಿವೃದ್ಧಿ ದಾಖಲೆ ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಗಮನ ಸೆಳೆದಿವೆ. ಈ ಅವಧಿಯಲ್ಲಿ ಭಾರತದ ಸಾಮರ್ಥ್ಯದ ಮೇಲಿನ ವಿಶ್ವಾಸ ಹೆಚ್ಚಾಗಿದೆ. ಮುಂದಿನ 5 ವರ್ಷಗಳನ್ನು ಎಲ್ಲಾ ಪ್ರದೇಶಗಳ ಸಮತೋಲಿತ ಬೆಳವಣಿಗೆಯನ್ನು ಉತ್ತೇಜಿಸುವ, ಸಬ್ಕಾ ವಿಕಾಸ್ ನ್ನು ಸಾಕಾರಗೊಳಿಸುವ ಒಂದು ಅನನ್ಯ ಅವಕಾಶವೆಂದು ನಾವು ನೋಡುತ್ತೇವೆ ಎಂದರು.
ಅಧಿಕ ಇಳುವಳಿ ಬೀಜಗಳ ಉತ್ಪಾದನೆ ಮತ್ತು ಸಂಶೋಧನೆ. ಎನ್ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆಯಾಗಲಿದೆ. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೋತ್ಸಾಹ ನೀಡಲಾಗುವುದು. ರಾಜ್ಯಗಳ ಜೊತೆಗೆ ಸಹಯೋಗದೊಂದಿಗೆ ಕೆಲಸ ಮಾಡಲಾಗುತ್ತದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ. ಮೂರು ಯೂರಿಯಾ ಪ್ಲ್ಯಾಂಟ್ ನಿರ್ಮಾಣ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post