ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲಿ ವಕ್ಫ್ ಬೋರ್ಡ್’ಗೆ #Waqf Board ನೀಡಲಾಗಿದ್ದ ಪರಮಾಧಿಕಾರಕ್ಕೆ ಕತ್ತರಿ ಹಾಕಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್(ತಿದ್ದುಪಡಿ) ಮಸೂದೆ, 2024ನ್ನು ಮಂಡಿಸಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ಈ ಮೂಲಕ 1995ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿದೆ.
Also read: ಯುಪಿಐ ಬಳಕೆದಾರರಿಗೆ ಗುಡ್ ನ್ಯೂಸ್ | ಇನ್ಮುಂದೆ ಇಷ್ಟು ಹಣ ನೀವು ವರ್ಗಾವಣೆ ಮಾಡಬಹುದು

ಇನ್ನು, ಇದಕ್ಕೂ ಮುನ್ನ ಕಾಂಗ್ರೆಸ್ ಸಂಸದರಾದ ಕೆ.ಸಿ. ವೇಣುಗೋಪಾಲ್ ಮತ್ತು ಹೈಬಿ ಈಡನ್ ಅವರು ವಕ್ಫ್ ಮಂಡಳಿಗಳ ಕಾನೂನು ತಿದ್ದುಪಡಿ ಮಸೂದೆಯನ್ನು ಮಂಡಿಸುವುದನ್ನು ವಿರೋಧಿಸಿ ನೋಟಿಸ್ ನೀಡಿದ್ದರು.
ಇದು ಕಠಿಣ ಕಾನೂನು ಮತ್ತು ಸಂವಿಧಾನದ ಮೇಲಿನ ಮೂಲಭೂತ ದಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post