ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನರೇಂದ್ರ ಮೋದಿ #Narendra Modi ಅವರು ಮೂರನೇ ಬಾರಿ ಪ್ರಧಾನಿಯಾಗಿ ಕೇಂದ್ರದಲ್ಲಿ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಜುಲೈ 23ರಂದು ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು, #Kiran Rijiju 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ #Central Budget ಅನ್ನು ಜುಲೈ 23 ರಂದು ಮಂಡಿಸಲಾಗುವುದು, ಸಂಸತ್ ಅಧಿವೇಶನ ಒಂದು ದಿನ ಮುಂಚಿತವಾಗಿ ಪ್ರಾರಂಭವಾಗಲಿದೆ ಎಂದು ಪ್ರಕಟಿಸಿದರು.
ಜುಲೈ 22 ರಂದು ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ.
Also read: ಜು.8ರಂದು ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ರಾಷ್ಟ್ರಪತಿಗಳು, ಭಾರತ ಸರ್ಕಾರದ ಶಿಫಾರಸಿನ ಮೇರೆಗೆ, 2024 ರ ಜುಲೈ 22 ರಿಂದ 2024 ರ ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯುವ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ #Nirmala Seetharaman ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದರು.
ಈಗ ಅವರು ತಮ್ಮ ಸತತ ಏಳನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಮೊರಾರ್ಜಿ ದೇಸಾಯಿ ಅವರು ನಿರ್ಮಿಸಿದ ಹಿಂದಿನ ದಾಖಲೆಯನ್ನು ಮೀರಿಸಿ, ಭಾರತದ ಇತಿಹಾಸದಲ್ಲಿ ಮೊದಲ ಹಣಕಾಸು ಮಂತ್ರಿಯಾಗಿದ್ದಾರೆ.
ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮೂರನೇ ಅವಧಿಯಲ್ಲಿ ಮಂಡಿಸಿದ ಮೊದಲ ಬಜೆಟ್ ಮತ್ತು ಬಿಜೆಪಿಗೆ ಸ್ವಂತವಾಗಿ ಬಹುಮತವಿಲ್ಲದ ಮೊದಲ ಬಜೆಟ್ ಇದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post