ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಫೆಬ್ರವರಿ 5ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ #Delhi Assembly Election ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಶುಕ್ರವಾರ ಬಿಡುಗಡೆಗೊಳಿಸಿದ್ದು, ಮಹಿಳೆಯರಿಗಾಗಿ ಮಹತ್ವದ ಘೋಷಣೆ ಮಾಡಿದ್ದು, ಮಹಿಳೆಯರಿಗೆ ತಿಂಗಳಿಗೆ 2500ರೂ. ಹಾಗೂ 500ರೂ.ಗೆ ಎಲ್‌ಪಿಜಿ ಸಿಲಿಂಡರ್ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ #J P Nadda ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿ, ಪಕ್ಷವು ಅಧಿಕಾರಕ್ಕೆ ಬಂದರೆ ಅಸ್ತಿತ್ವದಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳನ್ನು ಮುಂದುವರಿಸುವುದಾಗಿ ಮತ್ತು ಹಲವಾರು ಹೊಸ ಉಪಕ್ರಮಗಳನ್ನು ಪರಿಚಯಿಸಲಾಗುವುದು ಹಾಗೂ ಪ್ರಣಾಳಿಕೆಯು ಪ್ರಗತಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.

Also read: ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ
ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಂತೆ ದೆಹಲಿಯಲ್ಲಿಯೂ ನಾವು ಮಹಿಳೆಯರಿಗೆ ತಿಂಗಳಿಗೆ 2500 ರೂಪಾಯಿ ನೀಡುತ್ತೇವೆ ಮತ್ತು 500ರೂ. ಗೆ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿಯೂ ಭರವಸೆ ನೀಡಿದರು.

- ಮೊದಲ ಸಂಪುಟದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನ, ಹೆಚ್ಚುವರಿ ಆರೋಗ್ಯ ರಕ್ಷಣೆಗೆ 50.000ರೂ.
- ಮಹಿಳಾ ಸಮೃದ್ಧಿ ಯೋಜನೆಯಡಿ ದೆಹಲಿಯ ಮಹಿಳೆಯರಿಗೆ 2,500 ರೂ.
- ದೆಹಲಿಯ ಬಡ ಮಹಿಳೆಯರಿಗೆ 500ರೂ.ಗೆ ಎಲ್ ಪಿಜಿ ಸಿಲಿಂಡರ್
- ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿ ತಾಯಂದಿರಿಗೆ 21,000 ರೂ. ನೀಡಲಾಗುವುದು.
60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,000-2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3,000 ರೂ.ಗಳನ್ನು ಪಡೆಯುವ ಪಿಂಚಣಿ ಯೋಜನೆಯನ್ನು ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post