ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ #Delhi Assembly Election Result ಪ್ರಕಟಗೊಂಡಿದ್ದು, ಬಿಜೆಪಿ 47 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ದೆಹಲಿಯಲ್ಲಿ ಸುದೀರ್ಘ ಅವಧಿಯ ಬಳಿಕ ಅಧಿಕಾರ ಹಿಡಿದಿದೆ.
ಸುದೀರ್ಘ 27 ವರ್ಷಗಳ ಬಳಿಕ ದೇಶದ ರಾಜಧಾನಿಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದ್ದು, ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.

Also read: 100 GW ಸೌರ ವಿದ್ಯುತ್ | ಹಸಿರು ಭವಿಷ್ಯದತ್ತ ಭಾರತ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂತಸ
ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು
ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಪರಾಭವಗೊಂಡಿದ್ದಾರೆ. ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಈ ಮೂಲಕ ದೊಡ್ಡ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post