ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರ ರಾಜಧಾನಿಯಲ್ಲಿನ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ಯುಪಿಎಸ್’ಸಿ #UPSC ಆಕಾಂಕ್ಷಿಗಳ ದುರಂತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಲಾವೃತವಾದ ರಸ್ತೆಯಲ್ಲಿ ವಾಹನ ಚಲಾಯಿಸುವ ಮೂಲಕ ರಾವ್ಸ್ ಸಿವಿಲ್ ಸರ್ವಿಸ್ ಕೋಚಿಂಗ್ ಇನ್‌ಸ್ಟಿಟ್ಯೂಟ್ ಗೇಟ್’ಗೆ ಹಾನಿ ಮಾಡಿದ ಆರೋಪದ ಮೇಲೆ ಎಸ್’ಯುವಿ ಚಾಲಕ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
Also read: ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರಿನಲ್ಲಿ ವಿಐಎಸ್’ಎಲ್ ಕಾರ್ಮಿಕರಿಂದ ಪೂಜೆ | ಕಾರಣವೇನು?
ಕಳೆದ ಶನಿವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದ ಮಧ್ಯ ದೆಹಲಿಯ ಯುಪಿಎಸ್’ಸಿ ಕೋಚಿಂಗ್ ಸೆಂಟನರ್ ನೆಲಮಾಳಿಗೆಗೆ ನೀರು ನುಗ್ಗಿದ ಪರಿಣಾಮ 20 ವರ್ಷದ ಮೂವರು ಯುವ ಯುಪಿಎಸ್’ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದರು.
ಮೂವರು ಮೃತರನ್ನು ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ಎರ್ನಾಕುಲಂನ ನವೀನ್ ಡಾಲ್ವಿನ್ ಎಂದು ಗುರುತಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post