ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲಿ ಈ ಹಿಂದೆ ಜಾರಿಗೊಳಿಸಲಾಗಿದ್ದ ಸಾವಿರಾರು ಅನಾವಶ್ಯಕ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಕೇಂದ್ರ ಬಜೆಟ್ ಮಂಡನೆ ವೇಳೆ ಮಾಹಿತಿ ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವ್ಯವಹಾರಗಳಿಗೆ ಸುಲಭವಾಗುವಂತೆ ಸುಮಾರು 1486 ರದ್ದುಗೊಳಿಸಲಾಗಿದೆ ಎಂದಿದ್ದಾರೆ.
75 ಸಾವಿರ ಅನುಸರಣೆಗಳನ್ನು ತೆಗೆದು ಹಾಕಿರುವ ಕೇಂದ್ರ ಸರ್ಕಾರ, 25 ಸಾವಿರ ಅನಾವಶ್ಯಕ ನಿಯಮಗಳನ್ನು ರದ್ದುಪಡಿಸಿದೆ. 1483 ಅನುಪಯುಕ್ತ ಕಾನೂನುಗಳನ್ನು ರದ್ದು ಮಾಡಲಾಗಿದ್ದು, ಲೈಸೆನ್ಸ್ ರಾಜ್ ಕಿತ್ತು ಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post