ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಚುನಾವಣಾ ಬಾಂಡ್ ಯೋಜನೆ ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ Supreme Court ಮಹತ್ವದ ತೀರ್ಪು ನೀಡಿದೆ.
ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿ ಮಹತ್ವದ ಅಂಶಗಳನ್ನು ಉಲ್ಲೇಖಿಸಿದೆ.
ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್’ಗಳನ್ನು ನಿಷೇಧಿಸಿದ್ದು, ಇದನ್ನು ಅಸಂವಿಧಾನಿಕ ಎಂದು ಕರೆದಿದೆ. ಇದಕ್ಕೆ ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ಚುನಾವಣಾ ಬಾಂಡ್ ಯೋಜನೆ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ. ಇದು ಅಸಂವಿಧಾನಿಕವಾಗಿ ಎಂದು ನ್ಯಾಯಾಲಯ ಹೇಳಿದ್ದು, ರಾಜಕೀಯ ಪಕ್ಷಗಳು ಪಡೆಯುತ್ತಿರುವ ಹಣದ ಬಗ್ಗೆ ಮಾಹಿತಿ ಪಡೆಯುವುದು ಬಹಳ ಮುಖ್ಯ. ಚುನಾವಣಾ ಬಾಂಡ್’ಗಳು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದಿದೆ.
ಸುಪ್ರೀಂ ಕೋರ್ಟ್ ಮುಖ್ಯನಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲ ಹಾಗೂ ಮನೋಜ್ ಮಿಶ್ರಾ ಒಳಗೊಂಡ ಐವರು ಸದಸ್ಯರ ಪೀಠ ಈ ತೀರ್ಪು ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post