ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜಗದೀಪ್ ಧನಕರ್ #Jagadeep Dhankar ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ #Election Commission ತಿಳಿಸಿದೆ.
ಇದೇ ಆಗಸ್ಟ್ 7ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಗಸ್ಟ್ 21ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 22ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 25ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶ ಇರಲಿದೆ. ಸೆಪ್ಟೆಂಬರ್ 9ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದ ಧನಕರ್ ಅವರು ಅನಾರೋಗ್ಯ ಕಾರಣ ನೀಡಿ ಜುಲೈ 21ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದರು. ಈ ವೇಳೆ ಅವಕಾಶಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post