ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ #Bharat Matha ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ ಪ್ರಧಾನಿ ನರೇಂದ್ರ ಮೋದಿ #PM Narendra Modi ಎಂದು ಹೇಳಿದರು.
ನವದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ #RSS ಶತಮಾನೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿ ಮಾತನಾಡಿದದರು.
ವಿಜಯದಶಮಿಯಂದು #Vijayadashami ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ನವದೆಹಲಿಯಲ್ಲಿ ವಿಶೇಷ 100 ರೂಪಾಯಿ ನಾಣ್ಯ ಹಾಗೂ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.
ವಿಶೇಷವಾಗಿ ವಿನ್ಯಾಸಗೊಳಿಸಲಾದ ನಾಣ್ಯ ಮತ್ತು ಅಂಚೆಚೀಟಿಗಳು ರಾಷ್ಟ್ರಕ್ಕೆ ಆರ್‌ಎಸ್‌ಎಸ್ ಕೊಡುಗೆಯನ್ನು ಎತ್ತಿ ತೋರಿಸುತ್ತವೆ ಎಂದು ಪ್ರಧಾನಿ ಹೇಳಿದರು.
ನಾಣ್ಯದ ಮುಂಬದಿಯಲ್ಲಿ 100 ರೂಪಾಯಿಯನ್ನು ಗುರುತಿಸುವ ಅಂಕಿ ಇದ್ದರೆ, ಹಿಂಬದಿಯಲ್ಲಿ ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ನಮ್ಮ ಕರೆನ್ಸಿಯ ಮೇಲೆ ಭಾರತ ಮಾತೆಯ ಚಿತ್ರವನ್ನು ತೋರಿಸಿರುವುದು ಇದೇ ಮೊದಲು ಎಂದು ಪ್ರಧಾನಿ ಮೋದಿ ಹೇಳಿದರು.
1963 ರಲ್ಲಿ ಆರ್‌ಎಸ್‌ಎಸ್ ಕೂಡ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಹೆಮ್ಮೆಯಿಂದ ಭಾಗವಹಿಸಿತ್ತು ಎಂದು ಪ್ರಧಾನಿ ನೆನಪಿಸಿಕೊಂಡರು. ಈ ಅಂಚೆ ಚೀಟಿ ಆ ಐತಿಹಾಸಿಕ ಕ್ಷಣದ ಚಿತ್ರಣವನ್ನು ಹೊಂದಿದೆ ಎಂದು ಅವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 























