ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿಯ ಸಾರ್ವಜನಿಕ ಸ್ಮಶಾನವಾದ ನಿಗಮ್ಬೋಧ್ ಘಾಟ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ #Manmohan Sing ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆನಡೆಯಿತು.
ಇದಕ್ಕೂ ಮುನ್ನ ಮಾಜಿ ಪ್ರಧಾನಿಯ ಪಾರ್ಥಿವ ಶರೀರವನ್ನು ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಗೆ ಕೊಂಡೊಯ್ಯಲಾಯಿತು. ಸುಮಾರು ಒಂದು ಗಂಟೆ ಕಾಲ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ಮಲ್ಲಿಕಾರ್ಜುನ ಖರ್ಗೆ, #Mallikarjuna Kharge ಸೋನಿಯಾ ಗಾಂಧಿ, #Sonia Gandhi ರಾಹುಲ್ ಗಾಂಧಿ #Rahul gandhi ಸೇರಿದಂತೆ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಅಂತಿಮ ನಮನ ಸಲ್ಲಿಸಿದರು.
ಕಾಂಗ್ರೆಸ್ ನಾಯಕರು ತಮ್ಮ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಎಐಸಿಸಿ ಪ್ರಧಾನ ಕಚೇರಿಯಿಂದ ಸಿಂಗ್ ಅವರ ಅಂತಿಮ ಯಾತ್ರೆ ಪ್ರಾರಂಭವಾಯಿತು. ಸಿಂಗ್ ಅವರ ಪಾರ್ಥಿವ ಶರೀರವನ್ನು ಹೊತ್ತ ಹೂವಿನಿಂದ ಅಲಂಕೃತ ವಾಹನವು “ಮನಮೋಹನ್ ಸಿಂಗ್ ಅಮರ್ ರಹೇ” ಘೋಷಣೆಗಳ ನಡುವೆ ಕಾಂಗ್ರೆಸ್ ಪ್ರಧಾನ ಕಛೇರಿಯಿಂದ ಮೆರವಣಿಗೆ ಹೊರಟಿತು.
Also read: ರಾಮಕೃಷ್ಣ ಗುರುಕುಲದಲ್ಲಿ ಹೊಸ ವರ್ಷದ ಮೊದಲ ದಿನ ಜನ್ಮದಾತರಿಗೆ ಪಾದಪೂಜೆ
ರಾಷ್ಟ್ರಪತಿ ದ್ರೌಪದಿ ಮುರ್ಮು #President Droupadi Murmu ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರದ ಸಂದರ್ಭದಲ್ಲಿ ನಿಗಮಬೋಧ ಘಾಟ್‌ನಲ್ಲಿ ಅಂತಿಮ ನಮನ ಸಲ್ಲಿಸಿದರು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಸಿಂಗ್ ಅವರಿಗೆ ಗೌರವ ಸೂಚಕವಾಗಿ ಕೇಂದ್ರವು ದೇಶಾದ್ಯಂತ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ, ರಾಷ್ಟ್ರಧ್ವಜವನ್ನು ಭಾರತದಾದ್ಯಂತ ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಸಂಸ್ಥಾಪನಾ ದಿನಾಚರಣೆ ಸೇರಿದಂತೆ ಪಕ್ಷದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಮುಂದಿನ ಏಳು ದಿನಗಳವರೆಗೆ ರದ್ದುಗೊಳಿಸಲಾಗುವುದು ಮತ್ತು ಜನವರಿ 3 ರಂದು ಪುನರಾರಂಭಿಸಲಾಗುವುದು ಎಂದು ಕಾಂಗ್ರೆಸ್ ಘೋಷಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post