ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತ ಅತ್ಯುತ್ತಮ ನಾಯಕರೊಬ್ಬರನ್ನು ಕಳೆದುಕೊಂಡಿದ್ದು, ಮನಮೋಹನ್ ಸಿಂಗ್ ಅವರ ಬುದ್ಧಿವಂತಿಕೆ, ವಿನಯ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
India mourns the loss of one of its most distinguished leaders, Dr. Manmohan Singh Ji. Rising from humble origins, he rose to become a respected economist. He served in various government positions as well, including as Finance Minister, leaving a strong imprint on our economic… pic.twitter.com/clW00Yv6oP
— Narendra Modi (@narendramodi) December 26, 2024
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ #Manmohan Singh ನಿಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, #PM Modi ಮನಮೋಹನ್ ಸಿಂಗ್ ಅವರೊಂದಿಗಿನ ಕೆಲವೊಂದಿಷ್ಟು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರೊಂದಿಗೆ ಕಳೆದ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.
Also read: ಕುವೆಂಪು ವಿವಿ: ಸ್ನಾತಕ Non-NEP ಪದವಿ ಪರೀಕ್ಷೆ ಮುಂದೂಡಿಕೆ
ಹಣಕಾಸು ಸಚಿವರಾಗಿವುದರ ಜೊತೆಗೆ ಹಲವು ಸರ್ಕಾರಿ ಹುದ್ದೆಗಳನ್ನು ನಿಭಾಯಿಸಿದವರು. ದೇಶದ ಆರ್ಥಿಕ ನೀತಿಯ ಮೇಲೆ ಗಟ್ಟಿಯಾದ ಮುದ್ರೆಯನ್ನು ಒತ್ತಿದ್ದಾರೆ. ಭಾರತದ ಪ್ರಧಾನಿಯಾಗಿ ಜನರ ಜೀವನ ಮಟ್ಟ ಸುಧಾರಣೆಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಪ್ರಧಾನಿಯಾಗಿದ್ದಾಗ ನಾನು ಗುಜರಾತ್ ಸಿಎಂ ಆಗಿದ್ದೆ. ಹೀಗಾಗಿ ಇಬ್ಬರ ನಡುವೆ ಆಗಾಗ ಸಂವಹನ ನಡೆಯುತ್ತಿತ್ತು. ಅವರ ಬುದ್ಧಿವಂತಿಕೆ, ವಿನಯ ಸದಾ ನೆನಪಿನಲ್ಲಿ ಉಳಿಯುತ್ತದೆ. ಇಂತಹ ದುಃಖದಲ್ಲಿ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು, ಅಭಿಮಾನಿಗಳಲ್ಲಿ ಭಾಗಿಯಾಗಿದ್ದೇನೆ ಎಂದು ಬರೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post