ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮುಂದಿನ ಒಂದುವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ನೇಮಕಾತಿಗಳು ನಡೆಯಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಘೋಷಣೆ ಮಾಡಿದ್ದಾರೆ.
ಈ ಕುರಿತು ಇಂದು ಬೆಳಗ್ಗೆ ಪ್ರಧಾನಿ ಅವರ ಕಾರ್ಯಾಲಯ ಮಹತ್ವದ ಪ್ರಕಟಣೆ ಹೊರಡಿಸಿದ್ದು, ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಒಂದುವರೆ ವರ್ಷದಲ್ಲಿ ಖಾಲಿ ಹುದ್ದೆಗಳಿಗೆ ಸಮರೋಪಾದಿಯಲ್ಲಿ ನೇಮಕಾತಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಪ್ರಧಾನಿ ಅವರ ನೂತನ ಉಪಕ್ರಮ ಮಹತ್ವದ ಬದಲಾವಣೆ ತರುವ ನಿರೀಕ್ಷೆ ಹುಟ್ಟಿಸಿದ್ದು, ಮುಂದಿನ ಒಂದುವರೆ ವರ್ಷದಲ್ಲಿ ಅಭಿಯಾನದ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ ಎಂದು ಪ್ರಧಾನಿ ಅವರ ಕಚೇರಿ ತಿಳಿಸಿದೆ.
Also read: ಗಿಡ ಬೆಳೆಸಲು ಯುವಕರಿಗೆ ಪ್ರೇರಣೆ ನೀಡಬೇಕು: ತಹಶೀಲ್ದಾರ್ ಎನ್. ರಘುಮೂರ್ತಿ
ಉದ್ಯೋಗ ಸೃಷ್ಟಿಸುವುದಾಗಿ ಮೋದಿರವರು ಭರವಸೆ ನೀಡಿದ್ದರೂ, ಆರ್ಥಿಕ ಹಿಂಜರಿತ, ಕೋವಿಡ್ ಕಾರಣಗಳಿಂದ ಮತ್ತಷ್ಟು ಉದ್ಯೋಗಗಳು ಕಡಿತವಾಗಿದ್ದವು. ಇದರಿಂದ ವಿದ್ಯಾವಂತ ಯುವಕರು ನಿರುದ್ಯೋಗ ಸಮಸ್ಯೆ ಎದುರಿಸುವಂತಾಗಿತ್ತು. ಪಸ್ತುತ ಸರ್ಕಾರದ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲು ಮುಂದಾಗಿರುವುದು ವಿದ್ಯಾವಂತ ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ಧಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post