ಕಲ್ಪ ಮೀಡಿಯಾ ಹೌಸ್
ನವದೆಹಲಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಭೆ ನಡೆಸಿದರು.
ಇಂದು ಬೆಳಿಗ್ಗೆ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು.
ನಿರಂತರವಾಗಿ ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಸೂಚಿಸಿದರು. ದೆಹಲಿಯಿಂದಲೇ ತಮ್ಮ ಸಂಸದೀಯ ಕ್ಷೇತ್ರದ ಜನರ ಮತ್ತು ರೈತರ ಕಾಳಜಿಯ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಕಳಕಳಿ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post