ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸತತ ಮೂರನೆಯ ಅವಧಿಗೆ ಪ್ರಧಾನಿ ಮಂತ್ರಿಯಾಗಿ ನರೇಂದ್ರ ಮೋದಿ #Narendra Modi ಅವರು ನಾಳೆ ಜೂನ್ 9 ರಂದು ಸಂಜೆ 07.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನರೇಂದ್ರ ಮೋದಿಯವರ ಜೊತೆ ಹಲವು ಸಂಸದರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದ್ದು, ಹಲವಾರು ನೆರೆಯ ರಾಷ್ಟ್ರಗಳ ಮುಖ್ಯಸ್ಥರು ಸೇರಿ ಸಾವಿರಾರು ಮಂದಿ ಗಣ್ಯರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾಗವಹಿಸಲಿದ್ದು, ಮಾಲ್ಡೀವ್ಸ್ ಸರ್ಕಾರದ ಹಲವಾರು ಹಿರಿಯ ಅಧಿಕಾರಿಗಳೊಂದಿಗೆ ಸಮಾರಂಭಕ್ಕಾಗಿ ಮುಯಿಝು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್, ನೇಪಾಳ, ಮಾರಿಷಸ್ ಮತ್ತು ಸೀಶೆಲ್ಸ್ ಸರ್ಕಾರಗಳ ಮುಖ್ಯಸ್ಥರು ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಲ್ಪಟ್ಟ ನೆರೆಹೊರೆಯ ದೇಶಗಳಲ್ಲಿ ಪ್ರಮುಖರಾಗಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ತಮ್ಮ ಉಪಸ್ಥಿತಿಯನ್ನು ಖಚಿತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post