ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸತತ ಮೂರು ಬಾರಿ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಗೆಲುವಿನತ್ತ ಮುನ್ನಡೆಸಿದ ಪ್ರಧಾನಿ ನರೇಂದ್ರ ಮೋದಿ PM Narendra Modi ತಮ್ಮ ದೀರ್ಘಾವಧಿಯ ಸೇವೆಯ ಬಗ್ಗೆ ಮಾತನಾಡುತ್ತಾ ಭಾವುಕರಾದರು.
ಎನ್‌ಡಿಎ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ನಾನು ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ಭಾರತಮಾತೆಗೆ 12 ವರ್ಷ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ದೇವರ ಕೃಪೆ” ಎಂದು ಹೇಳಿದರು.
ರಾಜಕೀಯ ಸ್ಥಿರತೆಯ ಮಹತ್ವ ಒತ್ತಿಹೇಳಿದ ಪ್ರಧಾನಿ
ದೇಶದ ಜನತೆ ಈಗ ರಾಜಕೀಯ ಸ್ಥಿರತೆಯ ಮಹತ್ವವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಪ್ರಧಾನಿ ಹೇಳಿದರು.
ಸ್ಥಿರ ಸರ್ಕಾರದಿಂದ ನಿರ್ಣಾಯಕ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂಬ ಅರಿವು ಜನರಲ್ಲಿ ಬೆಳೆದಿದೆ ಎಂದು ಅವರು ತಿಳಿಸಿದರು.
Also read: ILCAD-2026: Week-long Level Crossing Safety Campaign Concludes in Hubballi Division
‘ವಿಕಸಿತ ಭಾರತ’ ಎಲ್ಲರ ಸಂಕಲ್ಪ
‘ವಿಕಸಿತ ಭಾರತ’ದ ಕನಸು ಯಾವುದೇ ಒಬ್ಬ ವ್ಯಕ್ತಿ ಅಥವಾ ಪಕ್ಷಕ್ಕೆ ಸೇರಿದ್ದಲ್ಲ. ಇದು ದೇಶದ ಪ್ರತಿಯೊಬ್ಬ ನಾಗರಿಕನ ಸಂಕಲ್ಪವಾಗಿದೆ. “ನನಗೆ ಜನರೇ ಜನಾರ್ದನ” ಎಂದು ಅವರು ಅಭಿಪ್ರಾಯಪಟ್ಟರು.
ಜನರ ಪ್ರಬುದ್ಧತೆಗೆ ಕೃತಜ್ಞತೆ
ರಾಷ್ಟ್ರಮಟ್ಟದಲ್ಲಿ ಜನರ ಪ್ರಬುದ್ಧತೆಯೇ ತಮಗೆ ಇಷ್ಟು ದೀರ್ಘಾವಧಿ ಸೇವೆ ಸಲ್ಲಿಸಲು ಅವಕಾಶ ನೀಡಿದೆ ಎಂದು ಪ್ರಧಾನಿ ಮೋದಿ ಕೃತಜ್ಞತೆ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















