ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತ ಮತ್ತು ಪಾಕ್ #India – Pakistan ತ್ವರಿತ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ #Donald Trump ಒತ್ತಾಯಿಸಿದ್ದರು. ಅಮೆರಿಕ ಮಧ್ಯಸ್ಥಿಕೆಯೊಂದಿಗೆ ಕೊನೆಗೂ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ #Jai Shankar ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಸಚಿವ ಮಾಹಿತಿ ಹಂಚಿಕೊಂಡಿರುವ ಅವರು, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ಹೊಂದಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಾಷಿಂಗ್ಟನ್: ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ಪೂರ್ಣ & ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಅಮೆರಿಕದ ಮಧ್ಯಸ್ಥಿಕೆ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿಕೊಂಡ ಟ್ರಂಪ್, ಬಿಕ್ಕಟ್ಟನ್ನು ಶಮನಗೊಳಿಸಲು ‘ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ’ಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post