ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತ ದೇಶವನ್ನು ಜಾಗತಿಕ ಆಟಿಕೆ ಕೇಂದ್ರವನ್ನಾಗಿ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದು, ಇದಕ್ಕಾಗಿ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ.
ಆಟಿಕೆಗಳಿಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ನಿರ್ಮಿಸುವ ಯೋಜನೆಯನ್ನು ಜಾರಿಗೆ ತರುತ್ತೇವೆ. ಕ್ಲಸ್ಟರ್’ಗಳು, ಕೌಶಲ್ಯಗಳು ಮತ್ತು ಉತ್ಪಾದನಾ ಪರಿಸರ ವ್ಯವಸ್ಥೆಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತೇವೆ ಎಂದರು.
ಇದು ಮೇಡ್ ಇನ್ ಇಂಡಿಯಾ ಬ್ರ್ಯಾಂಡ್ #Made in India ಅನ್ನು ಪ್ರತಿನಿಧಿಸುವ ಉತ್ತಮ ಗುಣಮಟ್ಟದ, ವಿಶಿಷ್ಟ, ನವೀನ ಮತ್ತು ಸುಸ್ಥಿರ ಆಟಿಕೆಗಳನ್ನು ರಚಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ
ಇನ್ನು, ಬಜೆಟ್ ಭಾಷಣದಲ್ಲಿ ಪ್ರಧಾನ ಮಂತ್ರಿ ಧನ್ ಧ್ಯಾನ್ ಕೃಷಿ ಯೋಜನೆಯನ್ನು #PM Dhan Dhyan Krushi Yojane ಘೋಷಿಸಿದರು. ಇದು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದರು.
Also read: ದೇಶ ಎಂದರೆ ಮಣ್ಣು ಅಲ್ಲ | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?
ಈ ಯೋಜನೆಯು 1.7 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯಾಗಿದೆ. ಕೃಷಿ ಜಿಲ್ಲೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮ ಜಾರಿಯಾಗಲಿದೆ ಎಂದರು.
ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ. ಇದು ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.
ಇನ್ನು, ವಿಮಾ ಕ್ಷೇತ್ರಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಶೇ.100ಕ್ಕೆ ಏರಿಕೆ ಮಾಡಲಿದ್ದು, ಇಂಡಿಯಾ ಪೋಸ್ಟ್ ಸೇವೆ ಗ್ರಾಮೀಣ ಭಾಗಗಳಿಗೆ ವಿಸ್ತರಣೆಯಾಗಲಿದೆ. ಭೂಮಿ ದಾಖಲೆ ಆಧುನಿಕರಣ, ನಗರ ಯೋಜನೆ, ಮೂಲಸೌಕರ್ಯಗಳ ಪ್ಲಾನಿಂಗ್ ಡಿಜಿಟಲೀಕರಣ ಮಾಡಲಿದ್ದೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post