ಕಲ್ಪ ಮೀಡಿಯಾ ಹೌಸ್ | ನವದೆಹಲಿ |
‘ವಿದ್ಯಾಮಂತ್ರಿಗೆ ಕನ್ನಡ ಬರಲ್ಲ’ ಎಂದ ವಿದ್ಯಾರ್ಥಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷೆ ವಿಧಿಸಲು ಸೂಚಿಸಿರುವುದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Pralhad Joshi ಆಕ್ಷೇಪಿಸಿದ್ದಾರೆ.
‘ತಮಗೆ ಕನ್ನಡ ಬರುತ್ತದೆ. ಈಗೇನು ಉರ್ದು ಮಾತನಾಡುತ್ತಿದ್ದೇನಾ?’ ಎಂದು ಪ್ರಶ್ನಿಸುತ್ತಲೇ ವಿದ್ಯಾರ್ಥಿ ಮೇಲೆ ಗರಂ ಆಗಿದ್ದೂ ಅಲ್ಲದೇ, ಕ್ರಮ ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದು ಶಿಕ್ಷಣ ಸಚಿವರ ಬಾಲಿಶತನವನ್ನು ತೋರಿಸುತ್ತದೆ ಎಂದಿದ್ದಾರೆ ಜೋಶಿ.

Also read: ರೈತರ ಸಾಲದ ಕೊರತೆ ಸರಿಪಡಿಸಿ: ಕೇಂದ್ರ ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಮನವಿ
ತಮಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂದು ಈ ಹಿಂದೆ ಸ್ವತಃ ತಾವೇ ಹೇಳಿದ್ದಾರೆ. ಅದನ್ನೇ ಆ ವಿದ್ಯಾರ್ಥಿ ನೆನಪಿಸಿದ್ದಾನೆ. ಅದಕ್ಕಾಗಿ ವಿದ್ಯಾರ್ಥಿಗೆ ಶಿಕ್ಷೆ ವಿಧಿಸುವುದು ಸರ್ಕಾರ ಮತ್ತು ಶಿಕ್ಷಣ ಸಚಿವರು ಸರ್ವಾಧಿಕಾರಿ ಧೋರಣೆ ಆಗಿದೆ ಎಂದು ಪ್ರಲ್ಹಾದ ಜೋಶಿ ಖಂಡಿಸಿದ್ದಾರೆ.
ಕನ್ನಡ ನಾಡು-ನುಡಿಗೆ, ಅದರ ಗೌರವಕ್ಕೆ ಧಕ್ಕೆ ತರುವ ಯಾರೇ ಆದರೂ ಕನ್ನಡಿಗರು ಸಹಿಸುವುದಿಲ್ಲ. ಅಂಥದ್ದರಲ್ಲಿ ಶಿಕ್ಷಣ ಸಚಿವರೇ ಹೀಗೆ ವರ್ತಿಸಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತದೆ. ಶಿಕ್ಷಣ ಸಚಿವರ ಫರ್ಮಾನು ಇದಕ್ಕೆ ಇನ್ನೊಂದು ಉದಾಹರಣೆ ಎಂದು ಕೇಂದ್ರ ಸಚಿವರು ತಮ್ಮ X ಖಾತೆಯಲ್ಲಿ ಹೇಳಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post