ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನರೇಂದ್ರ ಮೋದಿ #Narendra Modi ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಗೆ ಎನ್‌ಡಿಎ ಮಿತ್ರ ಪಕ್ಷಗಳಾದ ಜೆಡಿಯು ಹಾಗೂ ಟಿಡಿಪಿ #JDU, TDP ಬೆಂಬಲ ಸೂಚಿಸಿವೆ ಎಂದು ತಿಳಿದುಬಂದಿದೆ.
ಮೊದಲನೇ ಹಂತದ ಎನ್‌ಡಿಎ ನಾಯಕರ ಸಭೆ ಮುಕ್ತಾಯಗೊಂಡಿದ್ದು, ಜೆಡಿಯು ಪಕ್ಷದ ನಿತೀಶ್ ಕುಮಾರ್ #Nithish Kumar ಹಾಗೂ ಟಿಡಿಪಿ ಪಕ್ಷದ ಚಂದ್ರಬಾಬು ನಾಯ್ಡು #Chandrababu Naidu ಮೋದಿ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಗೆ ಸಮ್ಮತಿ ಸೂಚಿಸಿ ಬೆಂಬಲ ಪತ್ರ ಹಸ್ತಾಂತರಿಸಿದ್ದಾರೆ ಎಂದು ವರದಿಯಾಗಿದೆ.

Also read: ಚುನಾವಣೆ ಮುಗಿದಿದೆ, ಬೇಸರ ಸಾಕು ಈ ವಿಷಯಗಳ ಬಗ್ಗೆ ಗಮನ ಹರಿಸೋಣ | ಬಿ.ವೈ. ರಾಘವೇಂದ್ರ ಹೇಳಿದ್ದೇನು?
ಇದೇ ವೇಳೆ ಯಾವುದೇ ಕಾರಣದಿಂದ ತಡಮಾಡದೆ, ತೊಂದರೆಗಳಿಗೆ ಆಸ್ಪದ ಎದುರಾಗದಂತೆ ತತಕ್ಷಣವೆ ಸರ್ಕಾರ ರಚಿಸಿ, ಪ್ರಮಾಣವಚನ ಕಾರ್ಯಕ್ರಮವನ್ನು ನಡೆಸಿ ಎಂದು ನಿತೀಶ್ ಕುಮಾರ್ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಸಲಹೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post