ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರದಲ್ಲಿ ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಜೂನ್ 24ರಿಂದ ಜುಲೈ 9ರವರೆಗೂ 18ನೇ ಲೋಕಸಭೆಯ ಮೊದಲ ಅಧಿವೇಶನ #Parliament first session ನಡೆಯಲಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಜೂನ್ 24ರಿಂದ ಜುಲೈ 3ರವರೆಗೂ ಅಧಿವೇಶನ ನಡೆಯಲಿದೆ. 9 ದಿನಗಳ ವಿಶೇಷ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಹೊಸ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.
Also read: ಕಣಿವೆ ರಾಜ್ಯದಲ್ಲಿ ಉಗ್ರರ ಗುಂಡಿನ ದಾಳಿ | ಸಿಆರ್’ಪಿಎಫ್ ಯೋಧ ಹುತಾತ್ಮ | ಭದ್ರತಾ ಸಿಬ್ಬಂದಿಗಳಿಗೆ ಗಾಯ
ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು #President Droupadi Murmu ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post