ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಬಹಳಷ್ಟು ಸಕಾರಾತ್ಮಕವಾಗಿದ್ದು, ರಾಜಕೀಯ ಹೊರತುಪಡಿಸಿ ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸೋಣ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ #H D Kumaraswamy ರಾಜ್ಯ ಸರ್ಕಾರಕ್ಕೆ ಹೇಳಿದ್ದಾರೆ.
ತಮ್ಮನ್ನು ಭೇಟಿಯಾದ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರೊಂದಿಗೆ ಅವರು ಮಾತನಾಡಿ ಚರ್ಚಿಸಿದರು.
Also read: ಹಾವೇರಿ ಭೀಕರ ಅಪಘಾತ | ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ | ಸಿಎಂ ಘೋಷಣೆ
ಪಕ್ಷ ಭೇದ ಮರೆತು ರಾಜಕೀಯ ಹೊರತುಪಡಿಸಿ ರಾಜ್ಯದ ಅಭಿವೃದ್ಧಿ ಗೆ ಒಟ್ಟಾಗಿ ಶ್ರಮಿಸೋಣ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದ ಬಗ್ಗೆ ತುಂಬಾ ಸಕಾರಾತ್ಮಕವಾಗಿದ್ದಾರೆ. ಎಲ್ಲರೂ ಸೇರಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸೋಣ ಹೆಚ್ಚು ಅನುದಾನವನ್ನು ಪಡೆಯೋಣ. ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಮುಗಿಸೋಣ ಎಂದಿದ್ದಾರೆ.
ಟಿ.ಬಿ. ಜಯಚಂದ್ರ ಅವರು ಸಹ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















