ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಾರ್ಚ್ 16ರ ನಾಳೆ ಮಧ್ಯಾಹ್ನ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಗೆ #LoksabhaElection2024 ದಿನಾಂಕ ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಈ ಕುರಿತಂತೆ ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದಿಂದ #ElectionCommission ಪತ್ರಿಕಾಗೋಷ್ಠಿ ಕರೆದಿದ್ದು, ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟವಾಗಲಿದೆ ಎಂದು ವರದಿಯಾಗಿದೆ.

ಇದರೊಂದಿಗೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕಗಳೂ ಸಹ ಘೋಷಣೆಯಾಗಲಿದೆ.
Also read: ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ
ಮಾಹಿತಿಯಂತೆ, ನಾಳೆ ಮಧ್ಯಾಹ್ನ ಚುನಾವಣಾ ದಿನಾಂಕ ಘೋಷಣೆ ಆದರೆ, ನಾಳೆಯಿಂದಲೇ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಹೇಳಲಾಗಿದೆ. ಒಂದು ವೇಳೆ ನಾಳೆಯಿಂದ ಜಾರಿಯಾಗದೇ ಇದ್ದರೆ ಅಧಿಸೂಚನೆ ಹೊರಡಿಸುವ ದಿನಾಂಕದಿಂದ ನೀತಿ ಸಂಹಿತೆ ಜಾರಿಯಾಗಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post