ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಒಲಿಂಪಿಕ್ಸ್ #Olympics ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ #Saina Nehwal ಮತ್ತು ಪರುಪಳ್ಳಿ ಕಶ್ಯಪ್ #Parupalli Kashyap ದಂಪತಿ ವಿಚ್ಛೇದನಕ್ಕೆ #Divorce ಮುಂದಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸೈನಾ, ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಆಲೋಚನೆಯ ನಂತರ ನಾವಿಬ್ಬರು ಬೇರೆಯಾಗಲು ನಿರ್ಧರಿಸಿದ್ದೇವೆ. ನೆನಪುಗಳಿಗೆ ನಾನು ಕೃತಜ್ಞನಾಗಿದ್ದೇನೆ ಮತ್ತು ಮುಂದುವರಿಯಲು ಉತ್ತಮವಾದದ್ದನ್ನು ಮಾತ್ರ ಬಯಸುತ್ತೇನೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
35 ವರ್ಷ ವಯಸ್ಸಿನ ಸೈನಾ 2018ರಲ್ಲಿ ಬ್ಯಾಡ್ಮಿಂಟನ್ ಆಟಗಾರನಾಗಿದ್ದ ಕಶ್ಯಪ್ ಅವರನ್ನು ವಿವಾಹವಾಗಿದ್ದರು. ಆದರೆ ಕಶ್ಯಪ್ ಅವರು ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post