ಕಲ್ಪ ಮೀಡಿಯಾ ಹೌಸ್ | ನವದಹೆಲಿ |
ಮುಡಾ ಪ್ರಕರಣಕ್ಕೆ #MUDA Case ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ #CM Siddaramaiah ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೌದು… ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ #Karnataka High Court ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ #Supreme Court ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ರದ್ದುಪಡಿಸಿದೆ.
ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ರಾಜಕಾರಣಿಗಳು ರಾಜಕೀಯ ಮಾಡಿಕೊಳ್ಳಲಿ, ಇದರಲ್ಲಿ ನಿಮಗೆ ಏನು ಕೆಲಸ ಎಂದು ಇಡಿಗೆ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ನನಗೆ ಇದರ ಬಗ್ಗೆ ಮಹಾರಾಷ್ಟ್ರದಲ್ಲಿ ಕೆಲವು ಅನುಭವಗಳಾಗಿವೆ. ದೇಶದಾದ್ಯಂತ ನೀವು ಇದನ್ನು ಮುಂದುವರಿಸಕೂಡದು ಎಂದು ಇ.ಡಿ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ರಾಜು ಅವರೊಂದಿಗೆ ಸಿಜೆಐ ಕಠಿಣವಾಗಿ ಮಾತನಾಡಿದ್ದಾರೆ. ಮುಂದುವರಿದು, ಏಕಸದಸ್ಯ ಪೀಠದ ತೀರ್ಪಿನಲ್ಲಿ ನಮಗೆ ಲೋಪ ಕಂಡುಬಂದಿಲ್ಲ. ಹೀಗಾಗಿ ಇಡಿ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ ಎಂದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ಗೆ ಇ.ಡಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post