No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಾಂಗ್ರೆಸ್ಸಿಗರಿಗೆ ಉತ್ತರಿಸುವ ಅಗತ್ಯವಿಲ್ಲ | ನಿಖಿಲ್ ಹೀಗೆ ಹೇಳಿದ್ದೇಕೆ?

kalpa News by kalpa News
December 10, 2024
in ರಾಷ್ಟ್ರೀಯ
0
ಕಾಂಗ್ರೆಸ್ಸಿಗರಿಗೆ ಉತ್ತರಿಸುವ ಅಗತ್ಯವಿಲ್ಲ | ನಿಖಿಲ್ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ #Nikhil Kumaraswamy ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ #Home Minister Amith Shah ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಚನ್ನಪಟ್ಟಣ ವಿಧಾನಸಭೆ ಚುನಾವಣೆ ನಂತರ ನವದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು; ಅತ್ಯಂತ ಗೌರವಪೂರ್ವಕವಾಗಿ ಅಮಿತ್ ಶಾ ಅವರನ್ನು ಸಂಸತ್ ಭವನದ ಅವರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಭೇಟಿ ಮಾಡಲಾಯಿತು. ಚನ್ನಪಟ್ಟಣ ಫಲಿತಾಂಶದ ಕುರಿತಾದ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಂಡೆ ಹಾಗೂ ಅವರು ಕೂಡ ನನಗೆ ಧೈರ್ಯ ತುಂಬಿ ಉತ್ತಮವಾಗಿ ಕೆಲಸ ಮಾಡುವಂತೆ ಹುರಿದುಂಬಿಸಿದರು ಎಂದರು.
ಅಲ್ಲದೆ; ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಅವರಲ್ಲಿ ಚರ್ಚೆ ನಡೆಸಲಾಯಿತು. ಮೈತ್ರಿಕೂಟಗಳ ಎರಡೂ ಪಕ್ಷಗಳು ಒಟ್ಟಾಗಿ ಹೋಗಬೇಕು. ತಳಮಟ್ಟದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಅಮಿತ್ ಶಾ ಅವರು ನನಗೆ ಮಾರ್ಗದರ್ಶನ ಮಾಡಿದರು ಎಂದು ನಿಖಿಲ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು

ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೀ, ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. ಎಲ್ಲಾ ನಾಯಕರು ಸಂಘಟನೆಗೆ ಹೆಚ್ಚು ಕೊಡಬೇಕು ಎಂದು ಸಲಹೆ ಮಾಡಿದರು ಎಂಬುದಾಗಿ ನಿಖಿಲ್ ಅವರು ತಿಳಿಸಿದರು.

ಕರ್ನಾಟಕ ಸರ್ಕಾರ ಜನಪರ ಆಡಳಿತ ನೀಡುತ್ತಿಲ್ಲ. ಜನರು ಸಾಕಷ್ಟು ತೊಂದರೆಯಲ್ಲಿ ಇದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ನಡೆಸುವಂತೆ ನಾಯಕರು ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಹೊಸ ಶಾಸಕನಿಗೆ ಶೋಭೆ ತರುವುದಿಲ್ಲ:

ದೇವೇಗೌಡರ ಬಗ್ಗೆ ಸಿ.ಪಿ.ಯೋಗೇಶ್ವರ್ ಕೀಳುಮಟ್ಟದ ಟೀಕೆ ಮಾಡಿರುವ ಬಗ್ಗೆ ತಿರುಗೇಟು ಕೊಟ್ಟ ನೀಡಿದ ನಿಖಿಲ್ ಅವರು, ಅರವತ್ತು ವರ್ಷ ಜನಪರವಾಗಿ ಕೆಲಸ ಮಾಡಿರುವ ದೇವೇಗೇಗೌಡರ ಬಗ್ಗೆ ಇಂಥ ಟೀಕೆ ಮಾಡುವುದು ಸರಿಯಲ್ಲ. ಅವರು ಶಾಸಕ ಸ್ಥಾನಕ್ಕೆ ಶೋಭೆ ತರುವ ಮಾತು ಆಡಬೇಕು ಎಂದು ತಿರುಗೇಟು ಕೊಟ್ಟರು.

ನಾನು ಸೋಲನ್ನು ತಲೆಬಾಗಿ ಸ್ವೀಕರಿಸಿದ್ದೇನೆ. ದೇವೇಗೌಡರು ನೆಲ, ಜಲದ ವಿಚಾರದಲ್ಲಿ ನಿರಂತರ ಹೋರಾಟ ನಡೆಸಿದ್ದಾರೆ. ಈಗಲೂ ಯುವ ಸಂಸದರು ನಾಚುವಂತೆ ಅವರು ಶಿಸ್ತುಬದ್ದವಾಗಿ ಕಲಾಪದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜನರ ಸಲುವಾಗಿ ಅವರು ರಾಜಕೀಯದಲ್ಲಿ ಮುಂದುವರಿದ್ದಾರೆ, ಮುಂದೂ ಮುಂದುವರೆಯುತ್ತಾರೆ ಎಂದರು ಅವರು.

ದೇವೇಗೌಡರಿಗೆ ಮೋದಿಯವರೇ ಸ್ವತಃ ಫೋನ್ ಮಾಡಿ ರಾಜಕೀಯ ತೊರೆಯದಂತೆ ಹೇಳಿದ್ದರು.  ರಾಜ್ಯಸಭೆ ತೊರೆಯದಂತೆ ಪ್ರಧಾನಿ ಮೋದಿಯವರೇ ಹೇಳಿ, ದೇಶಕ್ಕೆ ನಿಮ್ಮ ಮಾರ್ಗದರ್ಶನ ಬೇಕು ಎಂದು ಕೋರಿದ್ದರು. ಅವರ ಮಾತನ್ನು ಮೀರಲಾಗದೇ ದೇವೇಗೌಡರು ರಾಜಕಾರಣದಲ್ಲಿ ಇದ್ದಾರೆ ಎಂದು ನಿಖಿಲ್ ಅವರು ಹೇಳಿದರು.

Also read: ಪ್ರಧಾನಮಂತ್ರಿ ಸೂರ್ಯ ಘರ್‌‌ಗೆ ಈವರೆಗೂ ಎಷ್ಟು ಮಂದಿ ನೊಂದಾಯಿಸಿದ್ದಾರೆ?

ಹಾಸನಕ್ಕೆ ಸಮಾವೇಶಕ್ಕೆ ಉತ್ತರಿಸುವ ಅಗತ್ಯವಿಲ್ಲ:

ಹಾಸನದಲ್ಲಿ ಕಾಂಗ್ರೆಸ್ ನಾಯಕರು ಜನರ ತೆರಿಗೆ ಹಣದಲ್ಲಿ ಸಮಾವೇಶ ಮಾಡಿಕೊಂಡು ದೇವೆಗೌಡರ ಕುಟುಂಬವನ್ನು ನಿಂದಿಸಿದರು. ಅವರಿಗೆ ಸಮಾವೇಶ ಮಾಡಿ ಉತ್ತರ, ತಿರುಗೇಟು ಕೊಡಬೇಕು ಎಂದು ನಾನಾದರೂ ಭಾವಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.

ಮಂಡ್ಯದಲ್ಲಿ ಅದ್ದೂರಿಯಾಗಿ ಕುಮಾರಸ್ವಾಮಿ ಅವರ ಜನ್ಮದಿನ ಆಚರಿಸಬೇಕು ಎಂದು ನಮ್ಮ ನಾಯಕರು ನಿರ್ಧಾರ ಮಾಡಿದ್ದರು. ಆದರೆ, ಮಂಡ್ಯ ಸಾಹಿತ್ಯ ಸಮ್ಮೇಳನ, ವಿಧಾನಸಭೆ ಮತ್ತು ಸಂಸತ್ ಅಧಿವೇಶನ ನಡೆಯುತ್ತಿದೆ. ಹಾಗೆಯೇ ಕೇಂದ್ರ ಸಚಿವರಿಗೂ ಸಾಕಷ್ಟು ಪೂರ್ವಾನಿಗದಿತ ಕಾರ್ಯಕ್ರಮಗಳು ಇವೆ. ಈ ಹಿನ್ನೆಲೆಯಲ್ಲಿ ಸ್ವತಃ ಕಾರ್ಯಕ್ರಮ ಬೇಡವೆಂದು ಸ್ವತಃ ಕುಮಾರಸ್ವಾಮಿ ಅವರೇ ಸೂಚಿಸಿದ್ದಾರೆ ಎಂದು ನಿಖಿಲ್ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಪಕ್ಷದ ಅಧ್ಯಕ್ಷ ಸ್ಥಾನ; ನಾನು ನಿಷ್ಠಾವಂತ ಕಾರ್ಯಕರ್ತ ಎಂದ ನಿಖಿಲ್:

ನಾನು ಪಕ್ಷದ ಶಿಸ್ತಿನ ಸಿಪಾಯಿ. ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿಯೇ ಹೊರತು ನಿಖಿಲ್ ಕುಮಾರಸ್ವಾಮಿ ಅವರಿಂದ ಜೆಡಿಎಸ್ ಅಲ್ಲ. ನನ್ನ ಇತಿಮಿತಿಗಳ ಬಗ್ಗೆ ನನಗೆ ಅರಿವಿದೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ತಳಮಟ್ಟದ ಕಾರ್ಯಕರ್ತರನ್ನು  ಗುರುತಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುತೇನೆ. ಅವರ ಜತೆಯಲ್ಲಿ ನಿಂತು ಕೆಲಸ ಮಾಡುತ್ತೇನೆ. ನಮ್ಮ ಪಕ್ಷದಲ್ಲಿ ಸಾಕಷ್ಟು ಹಿರಿಯರಿದ್ದಾರೆ, ಹಿರಿಯ ನಾಯಕರ ಮಾರ್ಗದರ್ಶನದಿಂದ ಕಾರ್ಯಕರ್ತನಾಗಿ     ದುಡಿಯುತ್ತೇನೆ ಎಂದು ನಿಖಿಲ್ ಅವರು ತಿಳಿಸಿದರು.

ಚುನಾವಣೆಯಲ್ಲಿ ನಮಗೆ ಫಲ ಸಿಕ್ಕಿದೆ:

ಉಪ ಚುನಾವಣೆಯಲ್ಲಿ ಇಂಥ ಫಲಿತಾಂಶವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಸೋಲಿಗೆ ಸಾಕಷ್ಟು ಕಾರಣಗಳಿವೆ. ಚುನಾವಣೆ ಹಿಂದಿನ 48 ಗಂಟೆಗಳಲ್ಲಿ ಮಹಿಳೆಯರ ಖಾತೆಗೆ ಎರಡು ತಿಂಗಳ ಗೃಹಲಕ್ಷಿ ಹಣ ಒಟ್ಟಿಗೆ ಜಮೆ ಮಾಡಿದ್ದಾರೆ. ಅದನ್ನು ಪ್ರಶ್ನೆ ಮಾಡಬೇಕಿದೆ. ಸರ್ಕಾರ ಆಡಳಿತವನ್ನು ಎಷ್ಟರಮಟ್ಟಿಗೆ ದುರ್ಬಳಕೆ ಮಾಡಿಕೊಂಡಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಅಷ್ಟೆ. ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ಅವರು ನಿರ್ಧಾರ ಮಾಡಿದರು. ಮೈತ್ರಿಕೂಟದ ಎಲ್ಲಾ ನಾಯಕರ ಅಣತಿಯಂತೆ ಕೊನೆ ಕ್ಷಣದಲ್ಲಿ ನಾನು ಸ್ಪರ್ಧೆ ಮಾಡಬೇಕಾಯಿತು. ಕೇವಲ 15 ದಿನಗಳು ಮಾತ್ರ ಚುನಾವಣೆ ನಡೆಸಲು ನಮ್ಮ ಬಳಿ ಸಮಯವಿತ್ತು.ಅವರಿಗೆ ಸಾಕಷ್ಟು ಸಮಯ ಸಿಕ್ಕಿತ್ತು, ನಮ್ಮ ಕಡೆ ಅಭ್ಯರ್ಥಿ ಆಯ್ಕೆಯಲ್ಲಿ ವಿಳಂಬವಾಯಿತು. ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಒಂದು ಸಮುದಾಯಕ್ಕೆ ದೇವೇಗೌಡರು ಅನೇಕ ಕೊಡುಗೆಗಳನ್ನು ನೀಡಿದ್ದರು. ಅವರು ನಮ್ಮ ಕೈ ಹಿಡಿಯಲಿಲ್ಲ. ನಾಗಮಂಗಲದಲ್ಲಿ ಕೋಮು ಸಂಘರ್ಷ ಉಂಟಾಗಿತ್ತು. ಸಂಘರ್ಷದಲ್ಲಿ ಹಾನಿ ಉಂಟಾದ ಅಂಗಡಿ ಜನರಿಗೆ ಕುಮಾರಸ್ವಾಮಿ ಅವರು ಪರಿಹಾರ ನೀಡಿದ್ದಾರೆ. ಮುಸ್ಲಿಂ ಸಮುದಾಯಕ್ಕೂ ಪರಿಹಾರ ನೀಡಿದ್ದಾರೆ. ಚನ್ನಪಟ್ಟಣದ ಇತಿಹಾಸದಲ್ಲಿಯೇ ₹1200 ಕೋಟಿ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಸೋತಿದ್ದೇವೆ, ಇದೊಂದು ನಮಗೆ ಪಾಠ ಎಂದರು ಅವರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Home Minister Amith ShahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaNikhil Kumaraswamyಗೃಹ ಸಚಿವ ಅಮಿತ್ ಶಾನವದೆಹಲಿನಿಖಿಲ್ ಕುಮಾರಸ್ವಾಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಮಂತ್ರಿ ಸೂರ್ಯ ಘರ್‌‌ಗೆ ಈವರೆಗೂ ಎಷ್ಟು ಮಂದಿ ನೊಂದಾಯಿಸಿದ್ದಾರೆ?

Next Post

ಮರ್ಯಾದೆ ಬಿಟ್ಟು ನಿಂತು ಕಾಂಗ್ರೆಸ್ ಶಿಷ್ಟಾಚಾರ ಉಲ್ಲಂಘಿಸುತ್ತಿದೆ: ಕೇಂದ್ರ ಸಚಿವ ಜೋಶಿ ಆಕ್ರೋಶ

kalpa News

kalpa News

Next Post
ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಮರ್ಯಾದೆ ಬಿಟ್ಟು ನಿಂತು ಕಾಂಗ್ರೆಸ್ ಶಿಷ್ಟಾಚಾರ ಉಲ್ಲಂಘಿಸುತ್ತಿದೆ: ಕೇಂದ್ರ ಸಚಿವ ಜೋಶಿ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL