ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ತಮ್ಮ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಅಭಿಷೇಕ್ ಬಚ್ಚನ್, #Abhishek Bachan ಐಶ್ವರ್ಯಾ ರೈ #Aishwarya Rai ಮಗಳು ಆರಾಧ್ಯ ಬಚ್ಚನ್ #Aradhya Bachan ದೆಹಲಿ ಹೈಕೋರ್ಟ್ ಗೆ #Delhi High Court ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ.
ನನ್ನ ಆರೋಗ್ಯ ಕುರಿತು ಹಲವು ವೆಬ್ ಸೈಟ್ ಹಾಗೂ ಯೂ ಟ್ಯೂಬ್ ಗಳಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆಳೆಯುವ ಮಾಹಿತಿ ನೀಡಲಾಗುತ್ತಿದೆ. ಈಗಾಗಲೇ ಪ್ರಕಟವಾಗಿರುವ ಸುದ್ದಿಗಳನ್ನು ಕೂಡಲೇ ತೆಗೆದುಹಾಕಲು ನಿರ್ದೇಶನ ನೀಡಬೇಕು ಎಂದು ಆರಾಧ್ಯ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
13 ವರ್ಷದ ಆರಾಧ್ಯ ಬಚ್ಚನ್ ಅವರ ಅರ್ಜಿ ಪುರಸ್ಕರಿಸಿರುವ ದೆಹಲಿ ಹೈಕೋರ್ಟ್ ಗೂಗಲ್ ನಿಂದ #Google ಪ್ರತಿಕ್ರಿಯೆ ಕೇಳಿ ನೋಟಿಸ್ ಕಳುಹಿಸಿದೆ.
ಈ ಹಿಂದೆ 2023ರ ಏಪ್ರಿಲ್ 20ರಂದು ಆರಾಧ್ಯ ಬಚ್ಚನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಆಕೆಯ ಆರೋಗ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಹಲವಾರು ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿತ್ತು. ಇಂತಹ ವಿಡಿಯೋಗಳನ್ನು ಯೂಟ್ಯೂಬ್ ನಿಂದ #You tube ತೆಗೆದುಹಾಕುವಂತೆ ಗೂಗಲ್ ಗೆ ಸೂಚನೆ ನೀಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post