ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪರಿಣಾಮವಾಗಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ – 1 #Indira Gandhi International Airport ಮೇಲ್ಚಾವಣಿ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ಘಟನೆ ನಡೆದಿದ್ದು, ಟರ್ಮಿನಲ್ – 1 ರ ಮೇಲ್ಚಾವಣಿ ಕುಸಿದಿದೆ. ಪರಿಣಾಮವಾಗಿ ಓರ್ವ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಹಲವು ವಾಹನಗಳು ಜಖಂಗೊಂಡಿವೆ.
ದುರ್ಘಟನೆಯ ಕಾರಣ ಟರ್ಮಿನಲ್ 1ರಿಂದ ಎಲ್ಲ ನಿರ್ಗಮನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಚೆಕ್ ಇನ್ ಕೌಂಟರ್’ಗಳನ್ನು ಸಹ ಮುಚ್ಚಲಾಗಿದೆ ಎಂದು ವರದಿಯಾಗಿದೆ.
Also read: Terrible accident near Haveri | 13 pilgrims killed, many seriously injured
ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ದೇಶೀ ವಿಮಾನಗಳ ಹಾರಾಟ ಮಾತ್ರ ಮುಂದುವರೆಯಲಿದ್ದು, ವಿಪರೀತ ಮಳೆಯ ನಡುವೆ, ಈ ಟರ್ಮಿನಲ್ ಕಾರ್ಯಾಚರಣೆ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post