ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಘೋಷಣೆ ಮಾಡಿದ್ದಾರೆ.
2025-26ರ ಸಾಲಿನ ಬಜೆಟ್ #Union Budget 2025-26 ಭಾಷಣದಲ್ಲಿ ಈ ಕುರಿತಂತೆ ಘೋಷಣೆ ಮಾಡಿದ್ದಾರೆ.
ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿರುವ ಜಿಲ್ಲಾಸ್ಪತ್ರೆಗಳಲ್ಲಿಯೇ ಕ್ಯಾನ್ಸರ್ ರೋಗ ಚಿಕಿತ್ಸಾ ಘಟಕ ಹಾಗೂ ಕೇರ್ ಯೂನಿಟ್ #Cancer Care Unit ಆರಂಭಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

Also read: ಐತಿಹಾಸಿಕ ಘೋಷಣೆ | ಇಲ್ಲ..ಇಲ್ಲ.. ಇಷ್ಟು ಲಕ್ಷದವರೆಗೂ ಇನ್ಮುಂದೆ ಆದಾಯ ತೆರಿಗೆ ಪಾವತಿಸುವಂತಿಲ್ಲ
ಸರ್ಕಾರಿ ಪ್ರೌಢಶಾಲೆಗೆ ಬಿಗ್ ಗುಡ್ ನ್ಯೂಸ್
ದೇಶದಾದ್ಯಂತ ಇರುವ ಎಲ್ಲ ಸರ್ಕಾರಿ ಪ್ರೌಢಶಾಲೆಗಳಿಗೆ ಇಂಟರ್’ನೆಟ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದರೊಂದಿಗೆ ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಕಲ್ಪಿಸಲೂ ಸಹ ನಿರ್ಧರಿಸಲಾಗಿದೆ ಎಂದಿದ್ದಾರೆ.
50 ಕೋಟಿ ಶಾಲೆಗಳಲ್ಲಿ ಅಟಲ್ ಠಿಂಕರಿAಗ್ ಲ್ಯಾಬ್ ಆರಂಭಕ್ಕೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಅನುದಾನ ಮೀಸಲಿಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post