ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನರೇಂದ್ರ ಮೋದಿ #Narendra Modi ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಜೂನ್ 9ರ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಪ್ರಹ್ಲಾದ್ ಜೋಶಿ #Prahlad joshi ತಿಳಿಸಿದ್ದಾರೆ.
ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಸಮಾವೇಶಗೊಂಡ ಎನ್‌ಡಿಎ #NDA ಸಂಸದೀಯ ಪಕ್ಷದ ಸಭೆಯಲ್ಲಿ ಅವರು ಮಾತನಾಡಿ, ಜೂನ್ 9 ರಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡುವಂತೆ ಎನ್‌ಡಿಎ ನಾಯಕರಿಗೆ ಜೋಶಿ ಮನವಿ ಮಾಡಿದರು.
ಎನ್‌ಡಿಎ ಸಂಸದರಲ್ಲದೆ, ಮುಖ್ಯಮಂತ್ರಿಗಳು ಸೇರಿದಂತೆ ಮೈತ್ರಿಕೂಟದ ಹಿರಿಯ ನಾಯಕರು ಸಭೆಗೆ ಹಾಜರಾಗಿದ್ದರು. ಮೋದಿ ಅವರು ಎನ್‌ಡಿಎ ಸಂಸದರ ನಾಯಕರಾಗಿ ಆಯ್ಕೆಯಾದ ಬಳಿಕ ಮೈತ್ರಿಕೂಟದ ಹಿರಿಯ ಸದಸ್ಯರಾದ ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು, ಜೆಡಿಯುನ ನಿತೀಶ್ ಕುಮಾರ್ ಮತ್ತು ಶಿವಸೇನೆಯ ಏಕನಾಥ್ ಶಿಂಧೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು #President Droupad Murmu ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
Also read: ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು: ಮೊಕದ್ದಮೆ ಏನು?
ಮುಖ್ಯ ವೇದಿಕೆಯಲ್ಲಿ ಬಿಜೆಪಿಯ ಹಿರಿಯ ನಾಯಕರೊಂದಿಗೆ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್, ಶಿಂಧೆ, ಚಿರಾಗ್ ಪಾಸ್ವಾನ್, ಜಿತನ್ ರಾಮ್ ಮಾಂಝಿ, ಅನುಪ್ರಿಯಾ ಪಟೇಲ್, ಪವನ್ ಕಲ್ಯಾಣ್ ಸೇರಿದಂತೆ ಎನ್‌ಡಿಎ ನಾಯಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post