ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ #Lokasabha ಮಂಡಿಸಿದೆ.
“ಒಂದು ದೇಶ, ಒಂದು ಚುನಾವಣೆ” #One Nation One Election ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ (ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು.

Also read: ಪಿಐಬಿ ನೂತನ ನಿರ್ದೇಶಕರಾಗಿ ಡಾ.ಡಿ.ಜಿ. ಹಳ್ಳಿಕೇರಿ ಅಧಿಕಾರ ಸ್ವೀಕಾರ
ಬಳಿಕ ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ಮತಕ್ಕೆ ಹಾಕಲಾಯಿತು. ಮಸೂದೆ ಪರವಾಗಿ 269 ಮತ ಹಾಗೂ ವಿರುದ್ಧವಾಗಿ 198 ಮತಗಳು ಚಲಾವಣೆಯಾಗಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post