ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಆಪರೇಷನ್ ಸಿಂದೂರ್ #Operation Sindoor ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ #Indian Army ವಿಫಲಗೊಳಿಸಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಹೊರಡಿಸಿದ್ದು, ತಡರಾತ್ರಿ ಪಾಕಿಸ್ತಾನ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು ಈ ದಾಳಿಯನ್ನು ಭಾರತ 9 ಏರ್ ಡಿಫೆನ್ಸ್ ಸಿಸ್ಟಮ್ ನ್ನು #Air Defense System ನಾಶ ಮಾಡುವ ಮೂಲಕ ತಡೆಗಟ್ಟಿದೆ.

ಪಾಕಿಸ್ತಾನ ಚೀನಾದಿಂದ HQ-9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ಪಡೆದಿತ್ತು ಈಗ ಈ ವ್ಯವಸ್ಥೆಯನ್ನು ಭಾರತ ಸಂಪೂರ್ಣ ನಾಶ ಮಾಡಿದೆ. ದಾಳಿಯನ್ನು ಪಾಕಿಸ್ತಾನ ಸಹ ಖಚಿತಪಡಿಸಿದ್ದು, ದಾಳಿಯಲ್ಲಿ ನಾಲ್ವರು ಪಾಕಿಸ್ತಾನದ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post