ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಆಪರೇಷನ್ ಸಿಂದೂರ್ #Operation Sindoor ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ #Indian Army ವಿಫಲಗೊಳಿಸಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಹೊರಡಿಸಿದ್ದು, ತಡರಾತ್ರಿ ಪಾಕಿಸ್ತಾನ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು ಈ ದಾಳಿಯನ್ನು ಭಾರತ 9 ಏರ್ ಡಿಫೆನ್ಸ್ ಸಿಸ್ಟಮ್ ನ್ನು #Air Defense System ನಾಶ ಮಾಡುವ ಮೂಲಕ ತಡೆಗಟ್ಟಿದೆ.
ಆಪರೇಷನ್ ಸಿಂದೂರ್ ಗೆ ಪ್ರತೀಕಾರ ತೆಗೆದುಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ ಭಾರತದ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ ಭಟಿಂಡ, ಚಂಡೀಗಢ, ನಲ್ ಫಲೋಡಿ, ಉತ್ತರಲೈ, ಭುಜ್ ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು. ಇದಕ್ಕೆ ಉತ್ತರಿಸಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ.
ಪಾಕಿಸ್ತಾನ ಚೀನಾದಿಂದ HQ-9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ಪಡೆದಿತ್ತು ಈಗ ಈ ವ್ಯವಸ್ಥೆಯನ್ನು ಭಾರತ ಸಂಪೂರ್ಣ ನಾಶ ಮಾಡಿದೆ. ದಾಳಿಯನ್ನು ಪಾಕಿಸ್ತಾನ ಸಹ ಖಚಿತಪಡಿಸಿದ್ದು, ದಾಳಿಯಲ್ಲಿ ನಾಲ್ವರು ಪಾಕಿಸ್ತಾನದ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post