ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನರೇಂದ್ರ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ #Mallikarjuna Kharge ಅವರ ಆರೋಗ್ಯದ ಕುರಿತು ಪ್ರಧಾನಿ ಮೋದಿ #PM Modi ವಿಚಾರಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದರು. ಆದರೆ ತಕ್ಷಣವೇ ಸಾವರಿಸಿಕೊಂಡು ಮಾತು ಮುಂದುವರಿಸಿ, ನಾನು ಇಷ್ಟು ಬೇಗ ಸಾಯಲ್ಲ, ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿಯೇ ಸಾಯುವುದು ಎಂದು ಹೇಳಿದ್ದರು. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ನಿನ್ನೆ ರಾತ್ರಿ ಮಲ್ಲಿಕಾರ್ಜುನ ಖರ್ಗೆಗೆ ಕರೆ ಮಾಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಹಾಗೂ ಖರ್ಗೆ ಕೂಡ ಸಕಾರಾತ್ಮಕವಾಗಿಯೇ ಉತ್ತರಿಸಿದ್ದಾರೆ ಎನ್ನಲಾಗಿದೆ.
Also read: ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ | 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಇನ್ನು ಕೇಂದ್ರ ಸಚಿವ ಅಮಿತ್ ಶಾ #Amith Shah ಇದೇ ವಿಚಾರವಾಗಿ ಕಿಡಿಕಾರಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ವೈಯಕ್ತಿಕ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿದ್ದಾರೆ. ಖರ್ಗೆ ಅವರ ಇಂದು ತಮ್ಮ ಭಾಷಣದಲ್ಲಿ ಸಂಪೂರ್ಣ ಅನಗತ್ಯ ವಿಚಾರಗಳನ್ನು ಎತ್ತಿದ್ದಾರೆ. ಇದು ಅವರ ದ್ವೇಷ ಪ್ರದರ್ಶನ ಮಾಡುತ್ತದೆ. ಇದು ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್ ಹೊಂದಿರುವ ದ್ವೇಷ ಮತ್ತು ಭಯವನ್ನು ತೋರಿಸುತ್ತದೆ. ಅವರು ನಿರಂತರವಾಗಿ ಮೋದಿ ಅವರ ಬಗ್ಗೆಯೇ ಯೋಚಿಸುತ್ತಿದ್ದಾರೆ ಎಂದು ಹೇಳಿದರು.
ಅಂತೆಯೇ ಖರ್ಗೆ ಅವರ ಆರೋಗ್ಯ ಬೇಗ ಚೇತರಿಸಲಿ ಎಂದು ನಾನೂ ಪ್ರಾರ್ಥಿಸುತ್ತೇನೆ. ಪ್ರಧಾನಿ ಮೋದಿ ಮತ್ತು ನಾನು, ನಾವೆಲ್ಲರೂ ಖರ್ಗೆ ಅವರು ದೀರ್ಘ, ಆರೋಗ್ಯಕರ ಜೀವನವನ್ನು ನಡೆಸಬೇಕೆಂದು ಪ್ರಾರ್ಥಿಸುತ್ತೇವೆ. ಅವರು ಹಲವು ವರ್ಷಗಳ ಕಾಲ ಬದುಕಲಿ ಮತ್ತು 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣವನ್ನು ನೋಡಲು ಅವರು ಬದುಕಲಿ ಎಂದು ಅಮಿತ್ ಶಾ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post