ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ರಾಜಧಾನಿಯಲ್ಲಿ ಎಲ್ಲಾ ರೀತಿಯ ರ್‍ಯಾಲಿ, ಮೆರವಣಿಗೆಗಳನ್ನು ನಿರ್ಬಂಧಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ಹಲವು ರೈತ ಸಂಘಟನೆಗಳು ನಡೆಸುತ್ತಿರುವ ದೆಹಲಿ ಚಲೋ ಮೆರವಣಿಗೆಯಲ್ಲಿ ಅಧಿಕ ಸಂಖ್ಯೆ ರೈತರು ಪಾಲ್ಗೊಳ್ಳುವ ನಿರೀಕ್ಷೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 Section 144 ಜಾರಿಗೊಳಿಸಲಾಗಿದೆ ಎನ್ನಲಾಗಿದೆ.
ಮಾರ್ಚ್ 12ರವರೆಗೂ ಇದೇ ಕ್ರಮ ಮುಂದುವರಿಯಲಿದ್ದು, ಟ್ಯಾಕ್ಟರ್‌ಗಳಲ್ಲಿ ಜನರನ್ನು ತುಂಬಿಕೊಂಡು ಹೋಗುವುದಕ್ಕೂ ನಿಷೇಧ ಹೇರಲಾಗಿದೆ. ಸಿಂಘು, ಘಾಜಿಪುರ, ಟಿಕ್ರಿ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post