ಕಲ್ಪ ಮೀಡಿಯಾ ಹೌಸ್ | ನವದೆಹಲಿ |
‘ಮೋದಿ‘ ಎಂಬ ಉಪನಾಮದ ಬಗ್ಗೆ ಅಪಮಾನಕರವಾಗಿ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಯವರನ್ನು Rahul Gandhi ದೋಷಿ ಎಂದು ಗುಜರಾತ್ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದ ಹಿನ್ನೆಲೆ ಬಿಜೆಪಿ ವರಿಷ್ಠರೊಬ್ಬರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ.

ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ ಎಂದು ವ್ಯಂಗ್ಯ ಮಾಡುವ ಮೂಲಕ ಪರೋಕ್ಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಗುಜರಾತ್ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿ, ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದ್ದು, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ.












Discussion about this post