No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೊರೊನಾ ಮಧ್ಯೆಯೂ ದಾಖಲೆ ರಸಗೊಬ್ಬರ ಪೂರೈಕೆ: ಸದಾನಂದ ಗೌಡರಿಗೆ ಉಪ-ರಾಷ್ಟ್ರಪತಿ ಮೆಚ್ಚುಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2021
in ರಾಷ್ಟ್ರೀಯ
0
‘ಕೊರೋನಾ ಪರೀಕ್ಷೆ’ಯಲ್ಲಿ ಕೇಂದ್ರ ರಾಸಾಯನಿಕ-ರಸಗೊಬ್ಬರಗಳ ಇಲಾಖೆ ಪಾಸ್!

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಕೊರೊನಾ ಸಂಕಷ್ಟದ ಮಧ್ಯೆಯೂ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ ಶೇಕಡಾ 25ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ನಡೆದ ಪ್ರಶ್ನೋತ್ತರ ವೇಳೆ ಜಿ.ಬಿ.ಎಲ್ ನರಸಿಂಹರಾವ್ ಅವರು ಕೇಳಿದ ಪೂರಕ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೊರೊನಾದಿಂದಾಗಿ ರಸಗೊಬ್ಬರ ಉತ್ಪಾದನೆ ಮತ್ತು ಸಾಗಣೆ ಮಾಡುವುದು ಒಂದು ದೊಡ್ಡ ಸವಾಲಾಗಿತ್ತು. ಕೆಲಸಗಾರರ ಪೈಕಿ ಯಾರೀಗಾದರು ಕೊರೊನಾ ಸೋಂಕು ತಗುಲಿದರೆ ಇಡೀ ಪ್ಯಾಕ್ಟರಿಯನ್ನೇ ಮುಚ್ಚಬೇಕಾದ ಪರಿಸ್ಥಿತಿ ಇತ್ತು. ಅದೇ ರೀತಿ ಸಾಗಣೆ ಮಾಡುವಾಗ, ಲೋಡ್, ಅನ್‌ಲೋಡ್ ಮಾಡುವಾಗ ಕಾರ್ಮಿಕರ ಕೊರತೆ ಎದುರಾಗಿತ್ತು. ಆದರೆ ಇವನ್ನೆಲ್ಲ ಸಮರ್ಪಕವಾಗಿ ನೀಭಾಯಿಸಲಾಯಿತು ಎಂದು ಸಚಿವರು ವಿವರಿಸಿದರು.


ಅತಿವೃಷ್ಟಿಯಿಂದ ಕೆರೆ-ಕುಂಟೆಗಳು, ನೀರಾವರಿ ಜಲಾಶಯಗಳು ತುಂಬಿದವು. ಬಿತ್ತನೆ ಪ್ರದೇಶ ವೃದ್ಧಿಸಿ ರಸಗೊಬ್ಬರ ಬೇಡಿಕೆಯೂ ಹೆಚ್ಚಾಯಿತು. ಹೇಚ್ಚಾದ ಬೇಡಿಕೆಯನ್ನು ಪೂರೈಸಿ ಎಲ್ಲಿಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಯಿತು. ಇದರಿಂದಾಗಿ ಕೃಷಿ ವಲಯ ಶೇ.37ರಷ್ಟು ಬೆಳವಣಿಗೆ ಸಾಧಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇದಕ್ಕೆ ಮೊದಲು ವಿಜಯಸಾಯಿ ರೆಡ್ಡಿ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು ಆಂಧ್ರ ಪ್ರದೇಶದಲ್ಲಿಯೂ ರಸಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕಳ್ಳಲಾಗಿದೆ ಎಂದರು.


ಪ್ರತಿ ಹಂಗಾಮು ಶುರುವಾಗುವುದಕ್ಕೆ ಸಾಕಷ್ಟು ಮುಂಚಿತವಾಗಿಯೇ ನಮ್ಮ ಇಲಾಖೆಯು ಪ್ರತಿಯೊಂದು ರಾಜ್ಯಗಳ ಬೇಡಿಕೆಯ ವಿವರ ಪಡೆದು ಅದರ ಪ್ರಕಾರವೇ ವಿವಿಧ ನಮೂನೆಯ ರಸಗೊಬ್ಬರಗಳನ್ನು ಸರಬರಾಜಿಗೆ ವ್ಯವಸ್ಥೆ ಮಾಡುತ್ತದೆ. ಪ್ರತಿವಾರವೂ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ. ಇದಲ್ಲದೆ ಯಾವ-ಯಾವ ರಾಜ್ಯಗಳಲ್ಲಿ ಯಾವ-ಯಾವ ನಮೂನೆಯ ರಸಗೊಬ್ಬರಗಳು ಎಷ್ಟೆಷ್ಟು ಇವೆ ಎಂಬುದನ್ನು ನಮ್ಮ ಆನ್ಲೈನ್ ಡ್ಯಾಷ್‌ಬೋರ್ಡ್ ಸಂಯೋಜಿತ ರಸಗೊಬ್ಬರ ಪರಿಶೀಲನಾ ವ್ಯವಸ್ಥೆ (ಐಎಫ್‌ಎಂಎಸ್) ಮೂಲಕ ಪ್ರತಿದಿನವೂ ಪರಿಶೀಲಿಸಲಾಗುತ್ತದೆ ಮತ್ತು ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಕೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಸದಾನಂದ ಗೌಡ ವಿವರಿಸಿದರು.

ಸದಸ್ಯರ (ವಿಜಯಸಾಯಿ ರೆಡ್ಡಿ) ನಿರ್ದಿಷ್ಟ ಪ್ರಶ್ನೆಗೆ ಉತ್ತರಿಸಿದ ಸಚಿವರು ಆಂಧ್ರಪ್ರದೇಶದಲ್ಲಿ ಯಾವುದೇ ನಮೂನೆಯ ಗೊಬ್ಬರ ಕೊರತೆಯಾಗಿಲ್ಲ. ರಾಜ್ಯಕ್ಕೆ (ಎಪಿ) ಪ್ರಸಕ್ತ ಸಾಲಿನಲ್ಲಿ (2020-21) ಇದುವರೆಗೆ 17.5ಲಕ್ಷ ಟನ್ ಯೂರಿಯಾ, 4ಲಕ್ಷ ಟನ್ ಡಿಎಪಿ, 2.8ಲಕ್ಷ ಟನ್ ಎಂಓಪಿ ಹಾಗೂ 13.5ಲಕ್ಷ ಟನ್ ಎನ್‌ಪಿಕೆ ನಮೂನೆ ರಸಗೊಬ್ಬರ ಪೂರೈಕೆಯಾಗಿದೆ ಎಂದರು.

ಸಭಾಪೀಠದಲ್ಲಿದ್ದ ಉಪ-ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೊರೊನಾ ಸಾಂಕ್ರಮಿಕದ ಮಧ್ಯೆಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಂಡ ಸಚಿವ ಡಿ.ವಿ. ಸದಾನಂದ ಗೌಡರನ್ನು ಅಭಿನಂದಿಸಿದರು. ಸದಸ್ಯ ಜಿ. ಬಿ. ಎಲ್. ನರಸಿಂಹ ರಾವ್ ಅವರೂ ಮೆಚ್ಚುಗೆ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: D V Sadananda GowdaFertilizerIndiaKannada News WebsiteLatest Kannada NewsNewDelhiPolitical Newsನವದೆಹಲಿರಸಗೊಬ್ಬರ
Share219Tweet123Send
Previous Post

ಭದ್ರಾವತಿ: ಎಂಪಿಎಂ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಶಾಸಕ ಸಂಗಮೇಶ್ವರ್ ಎಂಡಿಗೆ ಸೂಚನೆ

Next Post

ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ: ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ: ಡಿಸಿಎಂ ಅಶ್ವತ್ಥನಾರಾಯಣ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL