ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಇಂದು ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ ಆಯ್ಕೆಯಾದ ಆರು ಶಾಸಕರು – ಪರ್ವೇಶ್ ವರ್ಮಾ, ಆಶಿಶ್ ಸೂದ್, ಪಂಕಜ್ ಸಿಂಗ್, ಮಂಜಿಂದರ್ ಸಿಂಗ್ ಸಿರ್ಸಾ, ಕಪಿಲ್ ಮಿಶ್ರಾ ಮತ್ತು ರವೀಂದರ್ ಇಂದ್ರಜ್ ಅವರು ಸಹ ನೂತನ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ದೆಹಲಿಯಲ್ಲಿ ಬಿಜೆಪಿ 26 ವರ್ಷಗಳ ನಂತರ ಅಧಿಕಾರಕ್ಕೆ ಬಂದಿದ್ದು, ರಾಮಲೀಲಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಇತರ ಹಿರಿಯ ಬಿಜೆಪಿ ನಾಯಕರು ಮತ್ತು ಎನ್‌ಡಿಎ ಮಿತ್ರಪಕ್ಷಗಳ ನಾಯಕರು ಭಾಗವಹಿಸಿದ್ದರು.
ದೆಹಲಿಗೆ ನಾಲ್ಕನೇ ಮಹಿಳಾ ಮುಖ್ಯಮಂತ್ರಿ
ಈ ಮೂಲಕ ದೆಹಲಿಯಲ್ಲಿ ನಾಲ್ಕನೇ ಬಾರಿಗೆ ಮಹಿಳೆ ಮುಖ್ಯಮಂತ್ರಿಯಾಗಿ ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ. ಈ ಹಿಂದೆ ಬಿಜೆಪಿಯಿಂದ ಸುಷ್ಮಾ ಸ್ವರಾಜ್, ಕಾಂಗ್ರೆಸ್ ನಿಂದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಾರ್ಟಿಯಿಂದ ಆತಿಶಿ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post