ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #Renukaswamy Murder Case ಸಂಬಂಧಪಟ್ಟಂತೆ 10 ದಿನಗಳ ಬಳಿಕ ದರ್ಶನ್ ಜಾಮೀನು #Bail ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ #Darshan ಹಾಗೂ ಏಳು ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ #Supreme Court ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧಿತರಾದ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ #Karnataka High Court ಸಂಪೂರ್ಣ ಜಾಮೀನು ದೊರೆತಿತ್ತು. ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಈಗ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಅಲ್ಲದೆ, ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ಬಗ್ಗೆ ಅಸಮಾಧಾನ ಹೊರಹಾಕಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಆದೇಶ ನೀಡಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ಮೊದಲು ವಾದ ಮಂಡಿಸಿದರು. ‘ಇದು ಭೀಕರ ಕೊಲೆ ಕೇಸ್. ಏಳು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ರದ್ದಾಗಬೇಕು ಎನ್ನುವುದು ನಮ್ಮ ವಾದ ಎಂದು ಅವರು ವಾದಿಸಿದರು. ಸದ್ಯ ಏಳು ಆರೋಪಿಗಳ ಜಾಮೀನನ್ನು ಮಾತ್ರ ರದ್ದು ಮಾಡಬೇಕು ಎಂದು ಕೋರಿದರು.
ಸಂಪೂರ್ಣ ವಾದ ಆಲಿಸಿದ ನ್ಯಾ. ಪರ್ದೀವಾಲಾ ನೇತೃತ್ವದ ಸುಪ್ರೀಂ ಪೀಠತೀರ್ಪನ್ನು ಕಾಯ್ದಿರಿಸಿದ್ದು ವಾರಗಳ ಬಳಿಕ ದರ್ಶನ್ ಬೇಲ್ ಭವಿಷ್ಯ ತಿಳಿಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post