ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ಜಾಮೀನು ರದ್ದು ಆದೇಶ ಪುನರ್ ಪರಿಶೀಲಿಸುವಂತೆ ಆರೋಪಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಪವಿತ್ರ ಗೌಡ #Pavithra Gowda ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್ #Supreme Court ಆದೇಶದ ಪುನರ್ ಪರಿಶೀಲನೆ ಕೋರಿದ್ದಾರೆ. ಗುರುವಾರ ನ್ಯಾ. ಪರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ
ಈ ಹಿಂದೆ ಹೈಕೋರ್ಟ್ #High Court ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಪುನರ್ ಪರಿಶೀಲನಾ ಅರ್ಜಿಯ ಪ್ರತಿಯನ್ನ ರಾಜ್ಯ ಸರ್ಕಾರದ ಪರ ವಕೀಲರಿಗೆ ಇನ್ನೂ ನೀಡಿಲ್ಲ. ಅರ್ಜಿ ಪ್ರತಿ ನೀಡಿದರೆ ಯಾವ ಆಧಾರದ ಮೇಲೆ ಅರ್ಜಿ ಸಲ್ಲಿಸಿದ್ದಾರೆನ್ನುವುದು ತಿಳಿಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















