ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ Laalu Prasad Yadav ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ತೇಜಸ್ವಿ ಯಾದವ್ ಮಾಹಿತಿ ನೀಡಿದ್ದಾರೆ.
ಮೆಟ್ಟಿಲುಗಳಿಂದ ಬಿದ್ದ ಕಾರಣ ಅವರ ದೇಹದ ಮೂರು ಭಾಗಗಳಲ್ಲಿ ಮುರಿತವಾಗಿದೆ. ಇದರಿಂದ ಅವರು ಚಲಿಸಲು ಸಾಧ್ಯವಾಗುತ್ತಿಲ್ಲ. ಏಮ್ಸ್ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಪತ್ನಿ ರಾಬ್ರಿ ದೇವಿ ನಿವಾಸದ ಮೆಟ್ಟಿಲುಗಳಿಂದ ಲಾಲೂ ಬಿದ್ದಿದ್ದರು. ಇದರಿಂದಾಗಿ ಅವರ ದೇಹವು ಮೂರು ಸ್ಥಳಗಳಲ್ಲಿ ಮುರಿತ ಕಂಡು ಬಂದಿತ್ತು. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ ತಡರಾತ್ರಿ ಪಾಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್‌ಲಿಫ್ಟ್ ಮಾಡಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ ಎನ್ನಲಾಗಿದೆ.
Also read: ಯಶ್, ರಾಧಿಕಾ ಚೆಂದದ ಫ್ಯಾಮಿಲಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post