ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮುಸ್ಲೀಮರ ಬಹುಪತ್ನಿತ್ವ ಕಂಡು ಬೇರೆಯವರಿಗೆ ಹೊಟ್ಟೆಕಿಚ್ಚು ಎಂದು ಖ್ಯಾತ ಚಿತ್ರ ಸಾಹಿತಿ ಜಾವೇದ್ ಅಖ್ತರ್ Jawed Akthar ಲೇವಡಿ ಮಾಡಿದ್ದಾರೆ.
ಉತ್ತರಾಖಂಡ್ ರಾಜ್ಯದಲ್ಲಿ ಜಾರಿಯಾಗಿರುವ ಏಕರೂಪ ನಾಗರಿಕ ಸಂಹಿತೆಗೆ ಬೆಂಬಲ ವ್ಯಕ್ತಪಡಿಸಿ ಅವರು ಈ ರೀತಿ ಮಾತನಾಡಿದ್ದಾರೆ.
ನಾನು ಸಮಾನ ಹಕ್ಕು ಮತ್ತು ಕಾನೂನಿನ ಪರವಾಗಿದ್ದು, ನನ್ನ ಮಗ ಮತ್ತು ಮಗಳಿಗೂ ಆಸ್ತಿಯಲ್ಲಿ ಸಮಪಾಲು ನೀಡಿದ್ದೇನೆ. ಹಾಗೆಯೇ ಇದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು. ಮುಸ್ಲಿಮರನ್ನು ಟೀಕಿಸುವುದಕ್ಕೆ ಮಾತ್ರವೇ ಜಾರಿಗೆ ತಂದಂತೆ ಆಗಬಾರದು ಎಂದು ಮನವಿ ಮಾಡಿದ್ದಾರೆ.
Also read: ಕಾಂಗ್ರೆಸ್ 17 ಅಭ್ಯರ್ಥಿಗಳ ಪಟ್ಟಿ ಫೈನಲ್ | ಇಂದೇ ಘೋಷಣೆ ಸಾಧ್ಯತೆ | ಸಂಭಾವ್ಯರ ಪಟ್ಟಿ ಇಲ್ಲಿದೆ
ಹಿಂದೂಗಳು ಅನಧಿಕೃತವಾಗಿ ಇಬ್ಬರು ಪತ್ನಿಯರನ್ನು ಹೊಂದಿರುತ್ತಾರೆ. ಮಾಹಿತಿ ಪ್ರಕಾರ ಇಂತಹವರ ಸಂಖ್ಯೆ ಹೆಚ್ಚಾಗಿಯೇ ಇದೆ. ಹೀಗಾಗಿ ಸಂಹಿತೆಯಲ್ಲಿ ಮುಸ್ಲಿಮರಿಗೆ ಮಾತ್ರ ಬಹುಪತ್ನಿತ್ವ ನಿಷೇಧ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post