ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಾಜಿ ಉಪಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ #Lalkrishna Advani ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಬುಧವಾರ ತಡರಾತ್ರಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ #AIMS Hospital ದಾಖಲಿಸಲಾಗಿದ್ದು, ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
Also read: ಶಿವಮೊಗ್ಗ | ಅತಿಕ್ರಮಣ ತೆರವುಗೊಳಿಸಿ, ಕಾನೂನು ಕ್ರಮ ತೆಗೆದುಕೊಳ್ಳಿ | ಜಿಲ್ಲಾಡಳಿತಕ್ಕೆ ಮನವಿ
96 ವರ್ಷದ ಅಡ್ವಾಣಿ ಅವರನ್ನು ಏಮ್ಸ್ ಹಳೆಯ ಖಾಸಗಿ ವಾರ್ಡ್’ನಲ್ಲಿ ದಾಖಲಿಸಲಾಗಿದ್ದು, ಮೂತ್ರಶಾಸ್ತç ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ರೀತಿಯಲ್ಲೂ ಆತಂಕಪಡುವ ಅಗತ್ಯವಿಲ್ಲ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post