ಕಲ್ಪ ಮೀಡಿಯಾ ಹೌಸ್ | ನವದೆಹಲಿ | ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಗ್ರಾಹಕರಿಗೆ ಕಡ್ಡಾಯ ಸೇವಾ ಶುಲ್ಕ ವಿಧಿಸದಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದ್ದರೂ ಅದನ್ನು ನಿರ್ಲಕ್ಷಿಸಿದ 5 ರೆಸ್ಟೋರೆಂಟ್‌ಗಳ ವಿರುದ್ಧ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಕ್ರಮ ಕೈಗೊಂಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ #Minister Pralhad Joshi ತಿಳಿಸಿದ್ದಾರೆ.
ಗ್ರಾಹಕರಿಗೆ ಒತ್ತಾಯ ಪೂರ್ವಕವಾಗಿ ಸೇವಾ ಶುಲ್ಕ ವಿಧಿಸದಂತೆ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ ಸಹ ಕೇರ್ ಮಾಡದ ಹಿನ್ನೆಲೆಯಲ್ಲಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ರಾಷ್ಟ್ರ ರಾಜಧಾನಿಯ 5 ರೆಸ್ಟೋರೆಂಟ್‌ಗಳ ಮೇಲೆ ದೂರು ದಾಖಲಿಸಿ ಕ್ರಮಕ್ಕೆ ಮುಂದಾಗಿದೆ ಎಂದರು.

ದೆಹಲಿಯ ಮಖ್ನಾ ಡೆಲಿ, ಕ್ಸೆರೋ ಕೋರ್ಟ್ಯಾರ್ಡ್, ಕ್ಯಾಸಲ್ ಬಾರ್ಬೆಕ್ಯೂ, ಚಾಯೋಸ್ ಮತ್ತು ಫಿಯೆಸ್ಟಾ ಬೈ ಬಾರ್ಬೆಕ್ಯೂ ನೇಷನ್ ರೆಸ್ಟೋರೆಂಟ್‌ಗಳಿಗೆ ಗ್ರಾಹಕ ರಕ್ಷಣಾ ಕಾಯ್ದೆ 2019ರ ಅಡಿಯಲ್ಲಿ ನೋಟಿಸ್ ನೀಡಿದ್ದು, ಕಡ್ಡಾಯ ಸೇವಾ ಶುಲ್ಕದ ಮೊತ್ತವನ್ನು ಮರುಪಾವತಿಸುವಂತೆ ನಿರ್ದೇಶನ ನೀಡಲಾಗಿದೆ.

ಹೈಕೋರ್ಟ್ ಆದೇಶದ ಹೊರತಾಗಿಯೂ ಕೆಲವು ರೆಸ್ಟೋರೆಂಟ್‌ಗಳು ಗ್ರಾಹಕರಿಂದ ಪೂರ್ವಾನುಮತಿ ಪಡೆಯದೆ ಕಡ್ಡಾಯ ಸೇವಾ ಶುಲ್ಕ ಪಡೆಯುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (1915)ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಗ್ರಾಹಕರ ಹಕ್ಕುಗಳ ನಿರ್ಲಕ್ಷ್ಯ ಮತ್ತು ಗ್ರಾಹಕ ರಕ್ಷಣಾ ಕಾಯ್ದೆ 2019ರ ಉಲ್ಲಂಘನೆ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post