ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ತೀವ್ರತರವಾದ ಬಿಸಿಗಾಳಿ ಬೀಸುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಸಂಬಂಧ ಭಾರತೀಯ ಹವಾಮಾನ ಇಲಾಖೆ #Metrology Department ಎಚ್ಚರಿಕೆ ನೀಡಿದ್ದು, ಮುಂದಿನ ಕೆಲವು ದಿನಗಳವರೆಗೆ ಪರಿಣಾಮಕಾರಿಯಾಗಿದೆ. ಹಾಗೂ ಈ ಪ್ರದೇಶಗಳಲ್ಲಿ ಅತಿ ಹೆಚ್ಚು ತಾಪಮಾನವು ಮುಂದುವರಿಯುತ್ತದೆ ಎಂದು ಮಾಹಿತಿ ನೀಡಿದೆ.
ಐಎಮ್‌ಡಿ ಮುನ್ಸೂಚನೆಗಳ ಪ್ರಕಾರ, ಪಶ್ಚಿಮ ಬಂಗಾಳದ ಅನೇಕ ಪ್ರದೇಶ ಹಾಗೂ ಉಪ ಹಿಮಾಲಯನ್ ಪಶ್ಚಿಮ ಬಂಗಾಳದ ಪ್ರತ್ಯೇಕ ಭಾಗಗಳು ಸೇರಿದಂತೆ ಉತ್ತರ ಒಡಿಶಾದ ಕೆಲವು ಪ್ರದೇಶಗಳಲ್ಲಿ ತೀವ್ರವಾದ ಶಾಖದ ಅಲೆಯನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
Also read: ಅದಮ್ಯ ಓದಿನ ಪ್ರೀತಿಯಿಂದ ಬಾಳಿನ ಅಂಧಕಾರ ದೂರ: ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ
ಅಲ್ಲದೆ, ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ರಾಯಲಸೀಮಾ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಾಲ್, ಕೇರಳ ಮತ್ತು ಕರ್ನಾಟಕದ ಒಳಭಾಗದಲ್ಲಿ ಶನಿವಾರ ಬಿಸಿಗಾಳಿ ಪರಿಸ್ಥಿತಿಗಳು ಕಂಡುಬರುವ ಸಾಧ್ಯತೆಯಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post